HomeKarnatakaBREAKING NEWS: ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

BREAKING NEWS: ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಉಡುಪಿ: ಕಾಪು ಲೀಲಾಧರ ಶೆಟ್ಟಿ, ವಸುಂಧರಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಪುವಿನ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ಜಿಲ್ಲೆ ಕಾಪು ತಾಲೂಕಿನಲ್ಲಿ ಲೀಲಾಧರ ಶೆಟ್ಟಿ ಸಮಾಜಸೇವಕರಾಗಿ ಹೆಸರು ಮಾಡಿದ್ದಾರೆ. ಸೇವಾ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದರು. ಒಮ್ಮೆ ಕಾಪು ವಿಧಾನಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರಳ ವ್ಯಕ್ತಿತ್ವದ ಲೀಲಾಧರ ಶೆಟ್ಟಿ, ಕಾಪು ರಂಗ ತರಂಗ ತಂಡದ ಮೂಲಕ ಕ್ರಿಯಾಶೀಲರಾಗಿದ್ದರು. ಅಶಕ್ತರ ನೆರವಿಗೆ ಮುಂದಾಗುತ್ತಿದ್ದರು. ಸಮಾಜದ ಬಗ್ಗೆ ಕಾಳಜಿ ಹೊಂದಿದ್ದರು. ದಂಪತಿ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular