HomeKarnatakaBREAKING: ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ

BREAKING: ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ

ಬಾಗಲಕೋಟೆ: ಮೂವರು ಪುತ್ರಿಯರಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದ ಮನೆಯಲ್ಲಿ ಘಟನೆ ನಡೆದಿದೆ. ರೇಖಾ(28), ಸನ್ನಿಧಿ(7), ಸಮೃದ್ಧಿ(4), ಶ್ರೀನಿಧಿ(2) ಮೃತಪಟ್ಟವರು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂವರು ಹೆಣ್ಣು ಮಕ್ಕಳಾಗಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದ ರೇಖಾ ಅವರು ಮಕ್ಕಳನ್ನು ಬೆಳೆಸುವುದು, ಓದಿಸುವುದು, ಮದುವೆ ಮಾಡುವುದು ಕಷ್ಟವೆಂದು ಚಿಂತೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಅವರು ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಾವಿನ ಹಣ್ಣಿನ ರಸದಲ್ಲಿ ರಾಸಾಯನಿಕ ಬೆರೆಸಿ ಮಕ್ಕಳಿಗೆ ಕುಡಿಸಿ ರೇಖಾ ಬಗಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular