HomeKarnatakaಡೆತ್ ನೋಟ್ ನಲ್ಲಿ ಹೆಸರಿದ್ದ ಮಾತ್ರಕ್ಕೆ ಆರೋಪಿ ಎಂಬ ತೀರ್ಮಾನ ಸಲ್ಲ: ಹೈಕೋರ್ಟ್ ಮಹತ್ವದ ಆದೇಶ

ಡೆತ್ ನೋಟ್ ನಲ್ಲಿ ಹೆಸರಿದ್ದ ಮಾತ್ರಕ್ಕೆ ಆರೋಪಿ ಎಂಬ ತೀರ್ಮಾನ ಸಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಆತ್ಮಹತ್ಯೆ ನೋಟ್ ನಲ್ಲಿ ವ್ಯಕ್ತಿಯ ಹೆಸರಿದ್ದ ಮಾತ್ರಕ್ಕೆ ಆತ ಆರೋಪಿ ಎಂಬ ತೀರ್ಮಾನ ಸರಿಯಲ್ಲ, ನಿಜಕ್ಕೂ ಆತ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆಯೇ ಇಲ್ಲವೇ ಎನ್ನುವುದರ ಬಗ್ಗೆ ಸಂಪೂರ್ಣ ತನಿಖೆ ಅತ್ಯಗತ್ಯವಿದೆ ಎಂದು ಹೈಕೋರ್ಟ್ ಕಲಬುರಗಿ ಪೀಠ ಮಹತ್ವದ ತೀರ್ಪು ನೀಡಿದೆ.

ಇತ್ತೀಚೆಗೆ ವಿಜಯಪುರ ಜಿಲ್ಲೆಯ ಪ್ರಕರಣವೊಂದರಲ್ಲಿ ಹೈಕೋರ್ಟ್ ಕಲಬುರಗಿ ಪೀಠ ತೀರ್ಪು ನೀಡಿದೆ. ಶಿಕ್ಷಕ ಬಸವರಾಜ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ಕಾರಣವೆಂಬ ಆರೋಪ ಎದುರಿಸುತ್ತಿದ್ದಾರೆ. ಹನುಮಂತರಾಯಪ್ಪ ಅವರು ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ವೆಂಕಟೇಶ್ ಟಿ. ನಾಯಕ್ ಅವರಿದ್ದ ಏಕಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆ ಪ್ರಕರಣಗಳಲ್ಲಿ ದೊರೆಯುವ ಡೆತ್ ನೋಟ್ ಗಳಲ್ಲಿ ಕೆಲವು ಸಲ ವ್ಯಕ್ತಿ ಹೆಸರು ಉಲ್ಲೇಖವಾಗಿರುತ್ತದೆ. ಅಂತಹ ಪ್ರಕರಣಗಳಲ್ಲಿ ಮೊದಲಿಗೆ ತನಿಖೆ ನಡೆಸಿ ನೋಟ್ ನಲ್ಲಿರುವ ಅಂಶಗಳು, ಸತ್ಯಾಸತ್ಯತೆ ಪರಿಶೀಲಿಸುವ ಬದಲು ತಕ್ಷಣಕ್ಕೆ ಐಪಿಸಿ 306ರ ಅಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿ ಅಪರಾಧ ಎಸಗಿದ್ದಾರೆ ಎನ್ನುವಂತೆ ಭಾವಿಸಿ ಅವರನ್ನು ಬಂಧಿಸುವುದು ಸಾಮಾನ್ಯವಾಗಿದೆ. ಡೆತ್ ನೋಟ್ ನಲ್ಲಿರುವ ಅಂಶಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಶೀಲಿಸಿ ನಿಜವಾಗಿಯೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕಾಗುತ್ತದೆ. ಆಗ ಸತ್ಯಾಂಶ ಅರಿಯಲು ಪೂರ್ಣ ಪ್ರಮಾಣದ ತನಿಖೆ, ವಿಚಾರಣೆ ನಡೆಯಬೇಕಾಗುತ್ತದೆ ಎಂದು ಹೇಳಿದೆ.

ಒಂದು ವೇಳೆ ಐಪಿಸಿ ಸೆಕ್ಷನ್ 306 ಅನ್ವಯವಾಗಬೇಕಾದಲ್ಲಿ ಆತ್ಮಹತ್ಯೆಗೆ ಪ್ರಚೋದನೆಯೇ ಮುಖ್ಯ ಕಾರಣವೆಂದು ದೃಢಪಡಬೇಕು. ಬೇರೆ ದಾರಿ ಇಲ್ಲದೆ ಆತ್ಮಹತ್ಯೆ ದಾರಿ ಹಿಡಿದರೆಂದು ಸಾಬೀತುಪಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular