BREAKING: ಕೌಟುಂಬಿಕ ಕಲಹದಿಂದ ದುಡುಕಿದ ತಾಯಿ, ಮಗ ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಜಯಂತಿ(60), ಭರತ್(35) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಭರತ್ ಮದುವೆಯಾಗಿತ್ತು. ಅರಸಿಕೆರೆ ತಾಲೂಕಿನ ಬಾಗೂರನಹಳ್ಳಿಯ ಗೀತಾ ಜೊತೆಗೆ ಅವರ ಮದುವೆಯಾಗಿತ್ತು. ಅತ್ತೆ, ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇ ಪದೇ ಜಗಳ ನಡೆಯುತ್ತಿದ್ದ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ಪತ್ನಿ ಗೀತಾ ಮನೆ ಬಿಟ್ಟು ತವರು ಸೇರಿಕೊಂಡಿದ್ದರು.

ಕುಟುಂಬದವರು ಮತ್ತು ಗ್ರಾಮಸ್ಥರು ಎರಡು ಬಾರಿ ರಾಜೀ ಪಂಚಾಯಿತಿ ಮಾಡಿದ್ದರು. ಆದರೂ, ಗಂಡನ ಜೊತೆಗೆ ಇರದೆ ಪತ್ನಿ ತವರು ಮನೆ ಸೇರಿಕೊಂಡಿದ್ದರು. ಇದರಿಂದ ಮನನೊಂದ ತಾಯಿ ಜಯಂತಿ ಮತ್ತು ಮಗ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಮುಂಜಾನೆ ಕೆರೆಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read