ಅನಾರೋಗ್ಯಕ್ಕೆ ಬೇಸತ್ತ ಯುವತಿ ದುಡುಕಿನ ನಿರ್ಧಾರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ

ಶಿವಮೊಗ್ಗ: ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ನೇತಾಜಿ ಸರ್ಕಲ್ ವಿಜಯನಗರ ನಾಲ್ಕನೇ ಮುಖ್ಯರಸ್ತೆಯಲ್ಲಿ ನಡೆದಿದೆ.

ಸೌಮ್ಯ(25) ಆತ್ಮಹತ್ಯೆ ಮಾಡಿಕೊಂಡ ಯುವತಿ. ಶಿವಮೊಗ್ಗದ ನೇತಾಜಿ ಸರ್ಕಲ್ ವಿಜಯನಗರ ನಾಲ್ಕನೇ ಮುಖ್ಯ ರಸ್ತೆಯಲ್ಲಿ ವಾಸವಾಗಿದ್ದ ಸೌಮ್ಯ ಬಿಕಾಂ ಪದವೀಧರರಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಮಾಚೇನಹಳ್ಳಿಯ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.

ಉಸಿರಾಟ ಸಂಬಂಧಿಸಿದ ತೊಂದರೆಯಿಂದ ಬಳಲುತ್ತಿದ್ದ ಸೌಮ್ಯ ಅವರಿಗೆ ಶಿವಮೊಗ್ಗ ಸೇರಿ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಆದರೆ, ಉಸಿರಾಟ ಸಮಸ್ಯೆ ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದ ಸೌಮ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ರೂಂನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲಸಕ್ಕೆ ಹೋಗಿದ್ದ ಪೋಷಕರು ಮತ್ತು ಸಹೋದರ ಮನೆಗೆ ಬಂದಾಗ ವಿಚಾರ ಗೊತ್ತಾಗಿದೆ. ಕೂಡಲೇ ಆಕೆಯನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈಗಾಗಲೇ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read