HomeKarnatakaಶಾಸಕರ ಮನೆಯ ಆವರಣದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ವಾಚ್ ಮ್ಯಾನ್ ಶವ ಪತ್ತೆ

ಶಾಸಕರ ಮನೆಯ ಆವರಣದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ವಾಚ್ ಮ್ಯಾನ್ ಶವ ಪತ್ತೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ವಾಚ್ ಮ್ಯಾನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಲಬುರಗಿಯ ಶರಣನಗರದಲ್ಲಿರುವ ಅಜಯ್ ಸಿಂಗ್ ನಿವಾಸದ ವಾಚ್ ಮ್ಯಾನ್ ದೇವೇಂದ್ರ(32) ಮೃತಪಟ್ಟವರು. ಕಳೆದ ನಾಲ್ಕೈದು ವರ್ಷಗಳಿಂದ ಅಜಯ್ ಸಿಂಗ್ ನಿವಾಸದಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ದೇವೇಂದ್ರ ಬುಧವಾರ ತಡರಾತ್ರಿ ನೇಣು ಹಾಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಿಗ್ಗೆ ಅಡುಗೆ ತಯಾರಿಸುವವರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬ್ರಹ್ಮಪೂರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular