HomeKarnatakaSHOCKING: ಪತ್ನಿ ತವರುಮನೆ ಎದುರಲ್ಲೇ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

SHOCKING: ಪತ್ನಿ ತವರುಮನೆ ಎದುರಲ್ಲೇ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಇಂದೂರಕೊಪ್ಪ ಗ್ರಾಮದಲ್ಲಿ ಮಾವನ ಮನೆಯ ಎದುರಲ್ಲೇ ಅಳಿಯನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅರವಿಂದ ಚಿತ್ತರಗಿ(25) ಮೃತಪಟ್ಟ ವ್ಯಕ್ತಿ. ದೀಪಾವಳಿ ಹಬ್ಬದ ಅಂಗವಾಗಿ ಶನಿವಾರ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಆಗಮಿಸಿದ್ದ ಅರವಿಂದ ಹೆಣ್ಣು ಕೊಟ್ಟ ಮಾವನ ಮನೆ, ಪತ್ನಿಯ ತವರು ಮನೆ ಎದುರಲ್ಲಿ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಈ ವೇಳೆ ದೀಪಾವಳಿ ಪ್ರಯುಕ್ತ ಹಚ್ಚಿಡಲಾಗಿದ್ದ ದೀಪದಿಂದ ಏಕಾಏಕಿ ಬೆಂಕಿ ತಗುಲಿದೆ.

5 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಅರವಿಂದ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular