ಚಾಕುವಿನಿಂದ ಇರಿದುಕೊಂಡು ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಮಂಗಳೂರು ಹೊರವಲಯದ ಬೋಂದೇಲ್ ನಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಾರ್ಕಳ ಮೂಲದ ವಾದಿರಾಜ(51) ಮೃತಪಟ್ಟವರು ಎಂದು ಹೇಳಲಾಗಿದೆ. ಪತ್ನಿ, ಮಕ್ಕಳು ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಅಪಾರ್ಟ್ಮೆಂಟ್ ನಲ್ಲಿ ಹೊಟ್ಟೆ, ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಮನೆಗೆ ಬಂದ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಂಡು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read