ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆ

ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಮಕೂರು ನಗರದ ದೇವರಾಯಪಟ್ಟಣದಲ್ಲಿ ಘಟನೆ ನಡೆದಿದೆ. 36 ವರ್ಷದ ಕಮಲೇಶ್ ಮೃತಪ್ಪಟ್ಟವರು. ಮೂರು ತಿಂಗಳ ಹಿಂದೆ ಬೆಂಗಳೂರು ಮೂಲದ ಯುವತಿಯೊಂದಿಗೆ ಕಮಲೇಶ್ ಮದುವೆ ನಿಶ್ಚಯವಾಗಿತ್ತು. ಕೆಲವು ದಿನಗಳ ಹಿಂದೆ ಸ್ನಾನ ಮಾಡುವ ವೇಳೆ ಕೈಯಲ್ಲಿದ್ದ ಉಂಗುರ ಕಳೆದು ಹೋಗಿದ್ದು, ಈ ವಿಚಾರವನ್ನು ಮನೆಯವರಿಗೆ ಹೇಳಲು ಭಯಪಟ್ಟ ಕಮಲೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read