HomeKarnatakaಪುತ್ರ ಶೋಕ: ಮಗ ಮೃತಪಟ್ಟ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ

ಪುತ್ರ ಶೋಕ: ಮಗ ಮೃತಪಟ್ಟ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲದಲ್ಲಿ ಪುತ್ರ ಆತ್ಮಹತ್ಯೆ ಮಾಡಿಕೊಂಡ 13ನೇ ದಿನ ಆತನ ತಂದೆ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೆರ್ಲ ನಿವಾಸಿ ಯೋಗೇಶ್ ಪೂಜಾರಿ(41) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪುತ್ರ ಯಕ್ಷಿತ್(14) ಜನವರಿ 4ರಂದು ಮನೆ ಒಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಆತ್ಮಹತ್ಯೆಯಿಂದ ನೊಂದಿದ್ದ ಯೋಗೇಶ್ ಪೂಜಾರಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular