HomeKarnatakaವಿದ್ಯಾರ್ಥಿನಿ ಕರೆದೊಯ್ದು ರೈಲಿಗೆ ತಲೆಕೊಟ್ಟ ಶಾಲಾ ಬಸ್ ಚಾಲಕ: ಪೋಷಕರಿಗೆ ಶಾಕ್

ವಿದ್ಯಾರ್ಥಿನಿ ಕರೆದೊಯ್ದು ರೈಲಿಗೆ ತಲೆಕೊಟ್ಟ ಶಾಲಾ ಬಸ್ ಚಾಲಕ: ಪೋಷಕರಿಗೆ ಶಾಕ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಶಾಲಾ ಬಸ್ ಚಾಲಕ ಹಾಗೂ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಾಲಕ ಸಂತೋಷ್(28) ಮತ್ತು 8ನೇ ತರಗತಿ ಓದುತ್ತಿದ್ದ 14 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿ ಓದುತ್ತಿದ್ದು, ಸಂತೋಷ್ ಮೂರು ವರ್ಷಗಳಿಂದ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ.

ಮಗಳಿಗೆ ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದು, ಪೋಷಕರು ಈ ಬಗ್ಗೆ ಶಾಲಾ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದರೂ ಆತನ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ. ನಿನ್ನೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ವಿದ್ಯಾರ್ಥಿನಿಯನ್ನು ಸಂತೋಷ್ ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ. ಮಧ್ಯರಾತ್ರಿ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular