HomeKarnatakaಅತ್ತೆಯನ್ನೇ ಥಳಿಸಿದ ಅಳಿಯ: ತಾಯಿಗೆ ಹೊಡೆದಿದ್ದಕ್ಕೆ ಮನನೊಂದು ಪ್ರಾಣ ಕಳೆದುಕೊಂಡ ಪುತ್ರಿ

ಅತ್ತೆಯನ್ನೇ ಥಳಿಸಿದ ಅಳಿಯ: ತಾಯಿಗೆ ಹೊಡೆದಿದ್ದಕ್ಕೆ ಮನನೊಂದು ಪ್ರಾಣ ಕಳೆದುಕೊಂಡ ಪುತ್ರಿ

ಬೆಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ಅಳಿಯ ಅತ್ತೆಗೆ ಹೊಡೆದಿದ್ದಾನೆ. ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಶಾ(25) ನೇಣಿಗೆ ಶರಣಾದವರು ಎಂದು ಹೇಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಬೈರಶೆಟ್ಟಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಶಾ ಅವರ ಪತಿ ಲಕ್ಷ್ಮಿಪತಿ ಮತ್ತು ತಾಯಿ ಮಂಜುಳಾ ನಡುವೆ ಗಲಾಟೆ ನಡೆದು ಅತ್ತೆ ಮಂಜುಳಾ ಮೇಲೆ ಲಕ್ಷ್ಮಿಪತಿ ಹಲ್ಲೆ ಮಾಡಿದ್ದಾನೆ. ತನ್ನ ತಾಯಿ ಮೇಲೆ ಪತಿ ಹಲ್ಲೆ ನಡೆಸಿದ್ದಾನೆ ಎಂದು ಮನನೊಂದ ಆಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಲಾಟೆಯ ಬಳಿಕ ಪತಿ ಕೆಲಸಕ್ಕೆ ತೆರಳಿದ್ದ ವೇಳೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಕೆಲಸದಿಂದ ಮನೆಗೆ ವಾಪಸ್ ಆದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular