HomeKarnatakaಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಸಾವನ್ನಪ್ಪಿದ್ದಾಳೆಂದು ಭಾವಿಸಿ ಪಾಪಪ್ರಜ್ಞೆಯಿಂದ ಆತ್ಮಹತ್ಯೆ

ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಸಾವನ್ನಪ್ಪಿದ್ದಾಳೆಂದು ಭಾವಿಸಿ ಪಾಪಪ್ರಜ್ಞೆಯಿಂದ ಆತ್ಮಹತ್ಯೆ

ಹಾಸನ: ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಲ್ಲೆಗೊಳಗಾದ ಪತ್ನಿ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ.

ಪ್ರಶಾಂತ್(32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿಟ್ಟಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ. ಪತ್ನಿ ಬಿಂದು ಕೊಲೆ ಮಾಡಲು ಕುಡುಗೋಲಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು, ಆಕೆ ಮೃತಪಟ್ಟಿರುವುದಾಗಿ ತಿಳಿದು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಗೌರಿಕೊಪ್ಪಲು ಗ್ರಾಮದ ಪ್ರಶಾಂತ್ ಎರಡು ವರ್ಷಗಳ ಹಿಂದೆ ಬಿಟ್ಟಗೊಂಡನಹಳ್ಳಿಯ ಬಿಂದು ಜೊತೆ ಮದುವೆಯಾಗಿದ್ದು, ಕೌಟುಂಬಿಕ ಕಲಹದಿಂದಾಗಿ ಬಿಂದು ತವರುಮನೆ ಸೇರಿಕೊಂಡಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಆತ ಬಿಂದು ಮನೆಗೆ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ಕುಡುಗೋಲಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು, ಆಕೆ ಸಾವನ್ನಪ್ಪಿದ್ದಾಳೆಂದು ತಿಳಿದು ಆಕೆಯ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಬಿಂದು ಹಾಸನ ಜಿಲ್ಲಾಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular