ಬೆಂಗಳೂರು: ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆಯೊಡ್ದಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯಲ್ಲಿ ನಡೆದಿದೆ.
ಇಲ್ಲಿನ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಕೇರಳ ಮೂಲದ ಜಗನ್ (25) ಮೃತ ವಿದ್ಯಾರ್ಥಿ . ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ ನೋಟ್ ನಲ್ಲಿ ಮೂರು ನಂಬರ್ ಗಳನ್ನು ಯುವಕ ಬರೆದಿಟ್ಟಿದ್ದ. ಪರಿಶೀಲನೆ ನಡೆಸಿದ ಪೊಲೀಸರಿಗೆ ಫೇಕ್ ವಿಡಿಯೋ ಕಾಲ್ ನಲ್ಲಿ ಹಣ ಕಳೆದುಕೊಂಡಿರುವುದು, 25 ಸಾವಿರ ಹಣ ವರ್ಗಾವಣೆ ಮಾಡಿರುವುದು ಹಾಗೂ ಬೆತ್ತಲೆ ಫೋಟೋ ಹಾಗೂ ವಿಡಿಯೋ ವೈರಲ್ ಮಾಡುವ ಬೆದರಿಕೆ ಹಾಕಿರುವುದು ಪತ್ತೆಯಾಗಿದೆ. ಬ್ಲ್ಯಾಕ್ ಮೇಲ್ ಗೆ ಬೆದರಿ ಆತ್ಮಹತ್ಯೆಗೆ ಶರನಾಗಿರುವ ಶಂಕೆ ವ್ಯಕ್ತವಾಗಿದೆ.
