HomeLatest NewsBREAKING: ಡೆಂಟಲ್ ಕಾಲೇಜು ಆಡಳಿತ ಮಂಡಳಿ ಕಿರುಕುಳ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ: ವಿದ್ಯಾರ್ಥಿಗಳಿಂದ ತೀವ್ರಗೊಂಡ ಪ್ರತಿಭಟನೆ

BREAKING: ಡೆಂಟಲ್ ಕಾಲೇಜು ಆಡಳಿತ ಮಂಡಳಿ ಕಿರುಕುಳ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ: ವಿದ್ಯಾರ್ಥಿಗಳಿಂದ ತೀವ್ರಗೊಂಡ ಪ್ರತಿಭಟನೆ

ಬೆಂಗಳೂರು: ಡೆಂಟಲ್ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ.

23 ವರ್ಷದ ಯಶಸ್ವಿನಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಸ್ನೇಹಿತರು ನ್ಯಾಯಕ್ಕಾಗಿ ಆಗ್ರಹಿಸಿ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಬೊಮ್ಮನಹಳ್ಳಿತ ಪ್ರತಿಷ್ಠಿತ ಖಾಸಗಿ ಡೇಂಟಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ಯಶಸ್ವಿನಿ ವ್ಯಾಸಂಗ ಮಾಡುತ್ತಿದ್ದಳು. ಸೆಮಿನಾರ್ ಗೆ ಅವಕಾಶ ನೀಡದೇ ರೆಡಿಯಾಲಜಿ ಕೇಸ್ ಕೂಡ ನೀಡದೇ ವಿದ್ಯಾರ್ಥಿನಿಗೆ ಕಾಲೇಜಿನಲ್ಲಿ ಕಿರುಕುಳ ನೀಡಿ ಅವಮಾನಿಸಲಾಗಿದೆ. ಕಣ್ಣು ನೋವಿನ ಕಾರಣಕ್ಕೆ ಯಶಸ್ವಿನಿ ಬುಧವಾರ ಕಾಲೇಜಿಗೆ ಹೋಗಿರಲಿಲ್ಲ. ಗುರುವಾರ ಕಾಲೇಜಿಗೆ ಆಕೆ ಹೋದಾಗ ಕಣ್ಣಿಗೆ ಯಾವ ಡ್ರಾಪ್ಸ್ ಬಳಸಿದೆ? ಎಷ್ಟು ಹನಿ ಡ್ರಾಪ್ಸ್ ಹಾಕಿದೆ? ಪೂರ್ಟಿ ಬಾಟಲ್ ಹಾಕಿಕೊಂಡ್ಯಾ? ಎಂದು ಅನಗತ್ಯ ಪ್ರಶ್ನೆ ಮಾಡಿ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರು ಅವಮಾನಿಸಿದ್ದರು. ಪ್ರಾಧ್ಯಾಪಕರ ಮಾತಿನಿಂದ ತೀವ್ರವಾಗಿ ನೊಂದಿದ್ದ ವಿದ್ಯಾರ್ಥಿನಿ ದುಡುಕಿನ ನಿರ್ಧಾರ ಕೈಗೊಂಡು ಸಾವಿಗೆ ಶರಣಾಗಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇರುವ ಒಬ್ಬಳೇ ಮಗಳನ್ನೂ ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ತನ್ನ ಮಗಳನ್ನು ಹೀಯಾಳಿಸಿ, ಅವಮಾನಿಸಿದ ಕಾಲೇಜಿನ ಪ್ರಾಂಶುಪಾಲ ಹಾಗೂ ಪ್ರಾಧ್ಯಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ನನ್ನ ಮಗಳಿಗೆ ಕಣ್ಣು ನೋವಿತ್ತು. ಹಾಗಾಗಿ ನನಗೆ ಹೇಳಿಯೇ ಆಕೆ ರಜೆ ಹಾಕಿದ್ದಳು. ಪ್ರಾಧ್ಯಾಪಕರು ಆಕೆಯನ್ನು ಅವಮಾನ ಮಾಡಿದ್ದಾರೆ. ಇದರಿಂದ ಆಕೆ ಸಾವಿಗೆ ಕಾರಣರಾಗಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular