HomeKarnatakaBIG NEWS: ಹೆಚ್.ಡಿ.ಕುಮಾರಸ್ವಾಮಿ ಪರ ಪ್ರಚಾರ ಮಾಡ್ತಾರಾ? ಸಂಸದೆ ಸುಮಲತಾ ಹೇಳಿದ್ದೇನು?

BIG NEWS: ಹೆಚ್.ಡಿ.ಕುಮಾರಸ್ವಾಮಿ ಪರ ಪ್ರಚಾರ ಮಾಡ್ತಾರಾ? ಸಂಸದೆ ಸುಮಲತಾ ಹೇಳಿದ್ದೇನು?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹಿಂದೆ ಸರಿದಿರುವ ಸಂಸದೆ ಸುಮಲತಾ, ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರ ಮಾಡುತ್ತಾರಾ? ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

ಹೆಚ್.ಡಿ.ಕುಮಾರಸ್ವಾಮಿ ಭೇಟಿ ಹಾಗೂ ಚುನಾವಣಾ ಪ್ರಚಾರದ ಬಗ್ಗೆ ಸ್ವತಃ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಕುಮಾರಸ್ವಾಮಿ ಅವರದ್ದು ಸೌಜನ್ಯಯುತ ಭೇಟಿ. ಈಗಿನ ಚುನಾವಣೆ ಬಗ್ಗೆ ಏನೂ ಮಾತನಾಡಿಲ್ಲ ಎಂದರು.

ಕುಮಾರಸ್ವಾಮಿ ಭೇಟಿಯಾದಾಗ ಚುನಾವಣೆಯಲ್ಲಿ ಸಹಕಾರ ಕೊಡಿ. ಹಳೆಯದನ್ನೆಲ್ಲ ಮರೆತುಬಿಡಿ ಎಂದಷ್ಟೇ ಹೇಳಿದ್ದಾರೆ ಹೊರತು ಚುನಾವಣೆ ಬಗ್ಗೆ ಬೇರೆನೂ ಮಾತನಾಡಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್.ಡಿ.ಕೆ.ಪರ ಮಂಡ್ಯದಲ್ಲಿ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸುಮಲತಾ, ಈ ಬಗ್ಗೆ ಬಿಜೆಪಿಗೆ ಸೇರ್ಪಡೆಯಾದ ಬಳಿಕ ಮ್ಮಾತನಾಡುತ್ತೇನೆ. ಈಗಲೇ ಏನೂ ಹೇಲಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular