ಇದು ರಾಜಕಾರಣ ಈಗಲೇ ಏನನ್ನೂ ಹೇಳಲು ಆಗಲ್ಲ: ಬಿಜೆಪಿ ಸೇರ್ಪಡೆ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: ನನ್ನನ್ನು ಯಾರೂ ಕೂಡ ಅಧಿಕೃತವಾಗಿ ಪಕ್ಷಕ್ಕೆ ಆಹ್ವಾನ ಮಾಡಿಲ್ಲ ಎಂದು ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಹೊಸಕೋಟೆ ಕ್ಷೇತ್ರದ ಶಾಸಕರಾಗಿ ಶರತ್ ಆಯ್ಕೆಯಾಗಿದ್ದಾರೆ. ಶರತ್ ಅವರ ನಿವಾಸಕ್ಕೆ ಹೋಗಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಆದರೆ ನನ್ನನ್ನು ಇದುವರೆಗೂ ಯಾರೂ ಬಂದು ಸಂಪರ್ಕಿಸಿಲ್ಲ ಎಂದು ತಿಳಿಸಿದ್ದಾರೆ.

ಒಂದು ವೇಳೆ ಅಧಿಕೃತವಾಗಿ ಆಹ್ವಾನ ಮಾಡಿದರೆ ಆಗ ಯೋಚಿಸುತ್ತೇನೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷದಲ್ಲಿಯೂ ನಮ್ಮ ಸ್ನೇಹಿತರಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಮೇಲೆ ನನಗೆ ಒಲವಿತ್ತು. ಬೆಂಗಳೂರು ದಕ್ಷಿಣ ಅಥವಾ ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸಿ ಎಂದಿದ್ರು ಎಂದು ತಿಳಿಸಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅಂಬರೀಶ್ ಮಾತನಾಡಿ, ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ, ಇದು ರಾಜಕಾರಣ. ಅಂಬರೀಶ್ ಅವರಿಗಷ್ಟೇ ರಾಜಕೀಯ ಸೀಮಿತ ಎಂದುಕೊಂಡಿದ್ದೆ. ಆದರೆ ಅನಿವಾರ್ಯವಾಗಿ ನಾನು ರಾಜಕೀಯಕ್ಕೆ ಬರಬೇಕಾಯಿತು. ಸಮಯ ಸಂದರ್ಭಕ್ಕೆ ತಕ್ಕಂತೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read