ಇಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯೆ ಸುಮಲತಾ ಅಂಬರೀಶ್ ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಮಂಡ್ಯದಲ್ಲಿ ಬುಧವಾರವಷ್ಟೇ ಅವರು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು. ಶುಕ್ರವಾರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ 11:30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವ ಸಿ.ಟಿ. ರವಿ ಮೊದಲಾದವರ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಅವರು ಪಕ್ಷೇತರ ಸಂಸದರಾಗಿದ್ದರಿಂದ ಬಿಜೆಪಿ ಸೇರ್ಪಡೆಗೆ ತಾಂತ್ರಿಕ ಅಡಚಣೆ ಇತ್ತು. ಈಗ ಲೋಕಸಭೆ ಚುನಾವಣೆ ನಡೆಯುತ್ತಿರುವುದರಿಂದ ಬಿಜೆಪಿಗೆ ಸೇರ್ಪಡೆಗೆ ಹಾದಿ ಸುಗಮವಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಜೆಡಿಎಸ್ ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರಿಂದ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದ್ದು, ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read