ಸುಮಲತಾ ರಾಜಕೀಯ ಭವಿಷ್ಯ ಅತಂತ್ರ: ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಕಗ್ಗಂಟಿಗೆ ತೆರೆ ಬಿದ್ದಿದೆ.

ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ. ಬಿಜೆಪಿ ಲೋಕಸಭೆ ಚುನಾವಣೆ ಉಸ್ತುವಾರಿ ರಾಧಾ ಮೋಹನ್ ದಾಸ್ ಈ ವಿಷಯ ಪ್ರಕಟಿಸುವುದರೊಂದಿಗೆ ಮಂಡ್ಯ ಕ್ಷೇತ್ರದ ಕುರಿತಾದ ಗೊಂದಲಕ್ಕೆ ತೆರೆ ಬಿದ್ದಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ಭವಿಷ್ಯ ಅತಂತ್ರಕ್ಕೆ ಸಿಲುಕಿದ್ದು, ಅವರ ನಡೆ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದಂತೆ ಈ ಚುನಾವಣೆಯಲ್ಲಿಯೂ ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆಯೇ ಅಥವಾ ರಾಜಕಾರಣದಿಂದ ದೂರ ಇರುತ್ತಾರೆಯೇ ಎಂಬುದು ಚರ್ಚೆಗೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read