HomeKarnatakaರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಸುಮಲತಾ ಅಂಬರೀಶ್ ಸುದ್ದಿಗೋಷ್ಠಿ: ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಸಾಧ್ಯತೆ

ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಸುಮಲತಾ ಅಂಬರೀಶ್ ಸುದ್ದಿಗೋಷ್ಠಿ: ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಇಂದು ಮಧ್ಯಾಹ್ನ ಸುಮಲತಾ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಮಂಡ್ಯದ ತಮ್ಮ ನಿವಾಸದಲ್ಲಿ ಸುಮಲತಾ ಅಂಬರೀಶ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಬೆಂಬಲಿಗರ ಸಭೆ ನಡೆಸಿರುವ ಸುಮಲತಾ ಅಂಬರೀಶ್ ಅವರು ಬೆಂಗಳೂರು ಮತ್ತು ಮಂಡ್ಯದಲ್ಲಿ ಆಪ್ತರ ಜೊತೆಗೂ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಬಿಜೆಪಿ ಸೇರಲು ಬೆಂಬಲಿಗರಿಂದ ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ ಮಂಡ್ಯದ ತಮ್ಮ ನಿವಾಸದಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರೊಂದಿಗೆ ಸುಮಲತಾ ಅಂಬರೀಶ್ ಸಮಾಲೋಚನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರು ರಾಜ್ಯ ರಾಜಕಾರಣಕ್ಕೆ ಪ್ರವೇಶಿಸಲಿದ್ದು, ಬಿಜೆಪಿ ಸೇರಲಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜಕೀಯ ನಿಲುವು ಪ್ರಕಟಿಸಲಿದ್ದು ಯಾವ ಪಕ್ಷ ಸೇರಲಿದ್ದಾರೆ ಎಂಬುದರ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular