ಸುಮಲತಾ ಅಂಬರೀಶ್ ಮತ್ತೆ ಪಕ್ಷೇತರ ಸ್ಪರ್ಧೆ…? ಭಾರೀ ಕುತೂಹಲ ಮೂಡಿಸಿದ ಮಹತ್ವದ ಸಭೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಶ್ ಅವರು ಇಂದು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.

ಮಂಡ್ಯ ನಗರದಲ್ಲಿ ಬೆಂಬಲಿಗರು ಕಾರ್ಯಕರ್ತರ ಸಭೆ ಕರೆದಿರುವ ಸಂಸದೆ ಸುಮಲತಾ ಅಂಬರೀಶ್ ಇಂದು ತಮ್ಮ ರಾಜಕೀಯ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು,  ಮೈತ್ರಿಕೂಟದ ಅಭ್ಯರ್ಥಿಯಾಗಿ ಹೆಚ್‍.ಡಿ. ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.

ಸುಮಲತಾ ಅಂಬರೀಶ್ ಅವರು ಹೆಚ್‍.ಡಿ. ಕುಮಾರಸ್ವಾಮಿಗೆ ಬೆಂಬಲಿಸುತ್ತಾರೆಯೇ ಅಥವಾ ತಟಸ್ಥ ನಿಲುವು ತಾಳುತ್ತಾರೆಯೇ? ಇಲ್ಲವೇ ಪಕ್ಷೇತರರಾಗಿ ಸ್ಪರ್ಧಿಸುತ್ತಾರೆಯೇ ಎನ್ನುವುದು ಭಾರಿ ಕುತೂಹಲ ಮೂಡಿಸಿದೆ. ಮಂಡ್ಯ ನಗರದ ಕಾಳಿಕಾಂಬ ದೇವಾಲಯದಲ್ಲಿ ಬೆಳಗ್ಗೆ 10 ಗಂಟೆಗೆ ವಿಶೇಷ ಪೂಜೆ ಸಲ್ಲಿಸಿ ಸಭೆ ನಡೆಸಲಿರುವ ಸುಮಲತಾ ಅಂಬರೀಶ್ ತಮ್ಮ ರಾಜಕೀಯ ನಿರ್ಧಾರ ಪ್ರಕಟಿಸಲಿದ್ದಾರೆ. ಸಭೆಯಲ್ಲಿ ನಟರಾದ ದರ್ಶನ್, ಅಭಿಷೇಕ್ ಅಂಬರೀಶ್ ಭಾಗವಹಿಸಲಿದ್ದಾರೆ.

ಮಂಡ್ಯ ಸ್ವಾಭಿಮಾನಿಗಳ ಸೇವೆಗಾಗಿ ನಾನು ಯಾವತ್ತಿಗೂ ಬದ್ಧವಾಗಿದ್ದು, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಏನೇ ನಿರ್ಧಾರ ತೆಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿ ಮುಂದುವರೆಯಲಿದ್ದೇನೆ. ನಿಮ್ಮ ಸಲಹೆಗೆ ಯಾವತ್ತೂ ನೋವು ತರಲಾರೆ. ನಿಮ್ಮ ನಡೆಯೇ ನನ್ನ ನಡೆಯಾಗಿರಲಿದೆ ಎಂದು ಸುಮಲತಾ ಅಂಬರೀಶ್ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read