HomeHealthಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?: ಸಲಹೆಗಳು

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?: ಸಲಹೆಗಳು

ಬೇಸಿಗೆ ಆರಂಭವಾಗಲಿದ್ದು, ಬಿಸಿಲಿನ ತಾಪಮಾನದ ಅಲೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆ ಇದೆ. ಇದು ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಸಲಹೆ ನೀಡಿದ್ದಾರೆ.

ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು? ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಏನು ಮಾಡಬೇಕು?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು.
  • ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ.
  • ಆಗಾಗ್ಗೆ ನಿಧಾನವಾಗಿ ಧಾರಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಿರಿ.
  • ಹಣ್ಣಿನ ರಸ, ಪಾನಕಗಳನ್ನು ಕುಡಿಯಿರಿ.
  • ಹತ್ತಿಯ ನುಣುಪಾದ ಬಟ್ಟೆ, ಟಿಶ್ಯೂ ಕರವಸ್ತçದಿಂದ ಬೆವರನ್ನು ಒರೆಸಿರಿ.
  • ನೀರು, ಮಜ್ಜಿಗೆ, ಎಳೆನೀರು ಕುಡಿಯಬಹುದು.
  • ಬೆಚ್ಚಗಿನ, ಮಸಾಲೆ ರಹಿತ, ಶುದ್ದ ಸಾತ್ವಿಕ ಆಹಾರ ಸೇವಿಸಬೇಕು.
  • ಗಾಳಿಯಾಡುವಂತಹ ಪಾದರಕ್ಷೆ ಧರಿಸಿರಿ.
  • ಮನೆಯಿಂದ ಹೊರಗಡೆ ಹೋಗುವಾಗ ಜೊತೆಯಲ್ಲಿ ತಪ್ಪದೇ ಶುದ್ದ ಕುಡಿಯುವ ನೀರನ್ನು ತೆಗೆದುಕೊಂಡು ಹೋಗಬೇಕು.

ಪ್ರಥಮ ಚಿಕಿತ್ಸೆ ಹೇಗೆ?: ವ್ಯಕ್ತಿ ತೊದಲು ಮಾತು ಅಥವಾ ಅರ್ಥರಹಿತವಾಗಿ ಬಡಬಡಿಸಿದ್ದಲ್ಲಿ, ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿರಿ. ಕೆಳಗೆ ಮಲಗಿಸಿ, ಕಾಲುಗಳನ್ನು ತಿಕ್ಕಿ ಆರೈಕೆ ಮಾಡಿ.

ಆತ/ ಆಕೆಯ ಹಣೆ, ಕತ್ತು, ಪಾದ ತೊಡೆಯ ಸಂದುಗಳನ್ನು ಒದ್ದೆ ಬಟ್ಟೆಯಿಂದ ಒರೆಸಿರಿ (ತಂಪಾದ ಅಥವಾ ಐಸ್ ನೀರಿನಿಂದ ಒರೆಸಬೇಡಿ) ಚರ್ಮ ಕೆಂಪಾದರೆ, ಬೆವರು ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘವಾದ ತೀರ್ವ ಉಸಿರಾಟವಿದ್ದಲ್ಲಿ ತುರ್ತಾಗಿ ವೈದ್ಯರನ್ನು ಸಂಪರ್ಕಿಸಬೇಕು. ಇಲ್ಲವೇ 104ಕ್ಕೆ ಕರೆ ಮಾಡಬೇಕು.

ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸಿದ ನೀರು ಅಥವಾ ನೀರು ಶುದ್ದೀಕರಣ ಘಟಕದ ನೀರನ್ನು ಕುಡಿಯಲು ಬಳಸಬೇಕು.

ಕೈಗಳನ್ನು ಸಾಬೂನು ಮತ್ತು ನೀರಿನಿಂದ 45 ಸೆಕೆಂಡ್‌ಗಳ ಕಾಲ ತೊಳೆದ ನಂತರ ಆಹಾರ ಸೇವಿಸಬೇಕು. ನೀರಿನ ಸಂಗ್ರಹಣಗಳ ಮೇಲೆ ತಪ್ಪದೇ ಮುಚ್ಚಳ ಮುಚ್ಚಬೇಕು. ಮಲ, ಮೂತ್ರ ವಿಸರ್ಜನೆಗಾಗಿ ಶೌಚಾಲಯ ಬಳಸಬೇಕು. ಸುರಕ್ಷಿತ ಆಹಾರ ಮಾತ್ರ ಸೇವಿಸಿ, ಆದಷ್ಟು ಮನೆಯಲ್ಲಿ ತಯಾರಿಸಿದ ಆಹಾರಕ್ಕೆ ಆದ್ಯತೆ ನೀಡಿರಿ.

ಏನು ಮಾಡಬಾರದು?

  • ಬಿಗಿಯಾದ, ಗಾಢ ಬಣ್ಣದ, ಸಿಂಥೆಟಿಕ್ ಬಟ್ಟೆ ಧರಿಸಬಾರದು.
  • ಕುಷನ್‌ಯುಕ್ತ ಕುರ್ಚಿಯಲ್ಲಿ ಕೂರಬಾರದು.
  • ಸೋಡಾ ಇತ್ಯಾದಿ ಕಾರ್ಬೋನೇಟೆಡ್ ತಂಪು ಪಾನಿಯಗಳನ್ನು ಕುಡಿಯಬೇಡಿ.
  • ಬೆವರನ್ನು ಒರೆಸಲು ಒರಟಾದ ಬಟ್ಟೆಯನ್ನು ಉಪಯೋಗಿಸಬೇಡಿ.
  • ಕಾಫಿ, ಟೀ, ಅತಿ ಸಕ್ಕರೆ ಅಂಶವುಳ್ಳ ಪಾನೀಯ ಅತಿಯಾಗಿ ಸೇವಿಸಬಾರದು.
  • ಬಿಸಿಯಾದ ಮಸಾಲೆಯುಕ್ತ ಆಹಾರ ತಿನ್ನಬಾರದು.
  • ಮಾಂಸಹಾರ ಸೇವನೆ ಮತ್ತು ಮದ್ಯಪಾನ ಬೇಡ.
  • ಬಿಗಿಯಾದ ಗಾಳಿಯಾಡದ ಪಾದರಕ್ಷೆ ಅಥವಾ ಶೂ ಧರಿಸಬೇಡಿ.
  • ಉಷ್ಣತೆಯಿಂದ ಸುಸ್ತಾದಾಗ ತುಂಬಾ ತಣ್ಣಗಿನ ಅಥವಾ ಶೀತಲೀಕರಿಸಿದ ನೀರಿನಿಂದ ಒರೆಸಿಕೊಳ್ಳಬೇಡಿ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular