HomeKarnatakaಜನರೇ ಎಚ್ಚರ: ಕರ್ನಾಟಕದಲ್ಲಿ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು  

ಜನರೇ ಎಚ್ಚರ: ಕರ್ನಾಟಕದಲ್ಲಿ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು  

ಕರ್ನಾಟಕದಲ್ಲಿ ಈ ಬಾರಿ ಭಾರೀ ಮಳೆ, ಚಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರಿಗೆ ಮತ್ತೊಂದು ಅಪ್‌ಡೇಟ್ ಮಾಹಿತಿ ಇದೆ. ನಿಧಾನವಾಗಿ ಚಳಿಗಾಲ ಮರೆಯಾಗಿ ಬೇಸಿಗೆ ಬರುತ್ತದೆ. ಆದರೆ ಈ ಬಾರಿಯ ಬೇಸಿಗೆ ನೆತ್ತಿ ಸುಡಲಿದೆ. ಜನರು ಎಚ್ಚರದಿಂದ ಇರುವುದು ಅಗತ್ಯವಾಗಿದೆ.

ರಾಜ್ಯದ ಈ ಬಾರಿಯ ಬೇಸಿಗೆ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ)ದ ನಿವೃತ್ತ ನಿರ್ದೇಶಕ ಜಿ.ಎಸ್.ಶ್ರೀನಿವಾಸ ರೆಡ್ಡಿ ಮುನ್ಸೂಚನೆ ನೀಡಿದ್ದಾರೆ.

ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಬೇಸಿಗೆಯಲ್ಲಿ ಕರ್ನಾಟಕದಲ್ಲಿ ತಾಪಮಾನ ವಾಡಿಕೆಗಿಂತ ಹೆಚ್ಚು ಇರಲಿದೆ ಎಂದು ಹೇಳಿದೆ. ಈ ಬಾರಿ ಬೇಸಿಗೆಯಲ್ಲಿ ರಾಜ್ಯದಲ್ಲಿ ಉಷ್ಣಾಂಶ ವಾಡಿಕೆಗಿಂತ 1-4 ಡಿಗ್ರಿ ಸೆಲ್ಸಿಯಸ್ ತನಕ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇಸಿಗೆ ಆರಂಭ: ಫೆಬ್ರವರಿ 15ರಿಂದಲೇ ರಾಜ್ಯದಲ್ಲಿ ಬೇಸಿಗೆಯು ಪ್ರಾರಂಭವಾಗಲಿದೆ. ಗರಿಷ್ಠ ಉಷ್ಣಾಂಶ ವಾಡಿಕೆಗಿಂತ ಅಧಿಕವಾಗಿರಲಿದೆ ಎಂದು ಅಂದಾಜಿಸಲಾಗಿದೆ. ಸಾಮಾನ್ಯವಾಗಿ ಮಾರ್ಚ್‌ನಿಂದ ಮೇ ತನಕ ರಾಜ್ಯದಲ್ಲಿ ಬೇಸಿಗೆಗಾಲ ಎಂದು ಲೆಕ್ಕ ಹಾಕಲಾಗುತ್ತದೆ. ಆದರೆ ಈ ಬಾರಿ ಬೇಗ ಬೇಸಿಗೆ ಪ್ರಾರಂಭವಾಗಲಿದೆ.

ರಾಜ್ಯದಲ್ಲಿ ವಾಡಿಕೆಯಂತೆ ಗರಿಷ್ಠ ಉಷ್ಣಾಂಶ 28 ರಿಂದ 43 ಡಿಗ್ರಿ ತನಕ ದಾಖಲಾಗುತ್ತದೆ. ಆದರೆ ಈ ಬಾರಿ ವಾಡಿಕೆಗಿಂತ ಹೆಚ್ಚು ಉಷ್ಣಾಂಶ ಇರಲಿದ್ದು, ಮಕ್ಕಳು, ವೃದ್ಧರು ಎಚ್ಚರ ವಹಿಸುವುದು ಅಗತ್ಯವಾಗಿದೆ.

ಈ ಬಾರಿ ಉತ್ತರ ಕರ್ನಾಟಕ ಮಾತ್ರವಲ್ಲ ಕರಾವಳಿ ಕರ್ನಾಟಕ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರು ನಗರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ 1 ಡಿಗ್ರಿ ಸೆಲ್ಸಿಯಸ್ ಅಧಿಕ ತಾಪಮಾನ ಇರಲಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕಗಿಂತ 2 ಡಿಗ್ರಿ ತಾಪಮಾನ ಅಧಿಕವಾಗಿ ಇರಲಿದೆ. ಕೆಲವು ಸಲ ವಾಡಿಕೆಗಿಂತ 4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚು ದಾಖಲಾಗಲಿದೆ.

ಭಾರತೀಯ ಹವಾಮಾನ ಇಲಾಖೆ ಈ ಬಾರಿ ಬೇಸಿಗೆಯಲ್ಲಿ ಭಾರತದಲ್ಲಿ ಹೆಚ್ಚಿನ ತಾಪಮಾನ ದಾಖಲಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಿದೆ ಎಂದು ಜಿ.ಎಸ್.ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ. ಕರ್ನಾಟಕದಲ್ಲಿಯೂ ಉಷ್ಣಾಂಶದಲ್ಲಿ ಏರಿಕೆ ಕಂಡುಬರಲಿದೆ.

ಕಲ್ಯಾಣ ಕರ್ನಾಟಕ ವಿಭಾಗದಲ್ಲಿ, ಕಿತ್ತೂರು ಕರ್ನಾಟಕ ಭಾಗದಲ್ಲಿ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ. ರಾಯಚೂರು, ಬಳ್ಳಾರಿ, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚಿನ ಉಷ್ಣಾಂಶ ಅಂದರೆ ವಾಡಿಕೆಗಿಂತೆ 1-2 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ.

ಈ ಬಾರಿ ಜನವರಿ ಮತ್ತು ಫೆಬ್ರವರಿಯಲ್ಲಿ ರಾಜ್ಯದಲ್ಲಿ ಅತಿ ಕಡಿಮೆ ಮಳೆಯಾಗಲಿದೆ. ಮಾರ್ಚ್‌ನಲ್ಲಿ ಸುಮಾರು 8 ಮಿ.ಮೀ. ಮತ್ತು ಏಪ್ರಿಲ್‌ನಲ್ಲಿ 36 ಮಿ.ಮೀ. ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಉಷ್ಣಾಂಶ ಹೆಚ್ಚಾದಂತೆ ಗುಡುಗು ಸಹಿತ ಮಳೆಯ ಚಟುವಟಿಕೆಗಳು ಕಂಡುಬರುತ್ತವೆ, ಇವು ಮಾರ್ಚ್ ಆರಂಭದಲ್ಲಿ ಬರಬಹುದು. ಫೆಬ್ರವರಿ ಎರಡನೇ ವಾರದಿಂದಲೇ ಕರ್ನಾಟಕದಲ್ಲಿ ಬೇಸಿಗೆಯು ಆರಂಭವಾಗಲಿದೆ ಎಂದು ಅಂದಾಜಿಸಲಾಗಿದೆ.

ಈ ಬಾರಿ ಬೇಸಿಗೆಯಲ್ಲಿ ಬಿಸಿಲಿನ ಝಳ ಹೆಚ್ಚಿದ್ದರೂ ಸಹ ಕುಡಿಯುವ ನೀರಿನ ಕೊರತೆ ಉಂಟಾಗುವುದಿಲ್ಲ. ಕಳೆದ ವರ್ಷದ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದು, ರಾಜ್ಯದಲ್ಲಿ ನೀರಿನ ಅಭಾವ ಉಂಟಾಗುವುದಿಲ್ಲ. ಡ್ಯಾಂಗಳು ಭರ್ತಿಯಾಗಿದ್ದು, ನಿರಂತರವಾಗಿ ಕೃಷಿ ಚಟುವಟಿಕೆಗೆ ಸಹ ನೀರು ಸಿಗಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular