HomeKarnatakaಮಳೆಗಾಲದಲ್ಲೂ ಬೇಸಿಗೆ ಬಿಸಿಲಿಗೆ ಪೈಪೋಟಿ ನೀಡುವಂತಹ ತಾಪಮಾನ ದಾಖಲು, ಬಿಸಿಲ ಬೇಗೆಗೆ ಜನ ಕಂಗಾಲು

ಮಳೆಗಾಲದಲ್ಲೂ ಬೇಸಿಗೆ ಬಿಸಿಲಿಗೆ ಪೈಪೋಟಿ ನೀಡುವಂತಹ ತಾಪಮಾನ ದಾಖಲು, ಬಿಸಿಲ ಬೇಗೆಗೆ ಜನ ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಮಳೆಗಾಲದಲ್ಲಿಯೂ ಬೇಸಿಗೆ ಅವಧಿಯಲ್ಲಿ ದಾಖಲಾಗುವಂತಹ ತಾಪಮಾನ ದಾಖಲಾಗುತ್ತಿದೆ.

ಯಾದಗಿರಿಯಲ್ಲಿ ಆಗಸ್ಟ್ 17ರಂದು 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಹಾಸನದಲ್ಲಿ ಗರಿಷ್ಠ ತಾಪಮಾನ 29.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 18.5  ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗಿದೆ. ಈ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ದಾಖಲಾಗುವ ತಾಪಮಾನ ಮಳೆಗಾಲದ ಅವಧಿಯಲ್ಲಿ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಕೆಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಇದ್ದರೆ ಮತ್ತೆ ಕೆಲವು ಕಡೆ ಬೇಸಿಗೆ ರೀತಿಯ ವಾತಾವರಣ ಕಂಡು ಬರುತ್ತಿದೆ. ಬಿಸಿಲಿನ ಬೇಗೆಯಿಂದ ಜನ ಬಸವಳಿಯುವಂತಾಗಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ನಷ್ಟಿದೆ. ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮೀರಿದೆ.

ಆಗಸ್ಟ್ 18ರಿಂದ ಮುಂದಿನ ಒಂದು ವಾರ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular