BIG NEWS: ಬಿಸಿಲಿನ ತಾಪ ಹೆಚ್ಚಳ: ರಾಜ್ಯದ ಈ ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ

ಬೆಂಗಳೂರು: ಬೇಸಿಗೆ ಹಿನ್ನೆಲೆಯಲ್ಲಿ ಉತ್ತರ ಕರ್ನಟಕ ಭಾಗದ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಎರಡು ತಿಂಗಳ ಕಾಲ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸೂಕ್ತವಗೈ ಸ್ಪಂದಿಸಿರುವ ರಾಜ್ಯ ಸರ್ಕಾರ ಬೇಸಿಗೆ ಕಾರಣಕ್ಕೆ ತಾಪಮಾನ ಹೆಚ್ಚಾಅಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಎರಡು ತಿಂಗಳ ಕಾಲ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಿದೆ.

ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲ ಝಳ ಹೆಚ್ಚಿರುವುದರಿಂದ ಜಿಲ್ಲೆಗಳಲ್ಲಿ ಪ್ರಸ್ತುತ ಇರುವ ಕಚೇರಿಗಳ ವೇಳಾಪಟ್ಟಿ ಬದಲಾಗಿ ಬೆಳಿಗ್ಗೆ 8ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಕಚೇರಿ ಸಮಯ ನಿಗದಿಪಡಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯ ನಿರ್ವಹಿಸಲು ನಿರ್ದೇಶಿಸಿದರೆ ಸಮಯದ ಪರಿಮಿತಿ ಇಲ್ಲದೇ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿ ಸರ್ಕಾರ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read