ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ; ಆಕ್ಷೇಪಣೆಗೆ ಮೇ 17ರ ವರೆಗೆ ಅವಕಾಶ

ಮೊಬೈಲ್‌ ಆ್ಯಪ್‌ ಬಳಸಿ ರೈತರಿಂದಲೇ ಬೆಳೆ ಸಮೀಕ್ಷೆ | udayavani

ಹಾವೇರಿ ಜಿಲ್ಲೆಯಲ್ಲಿ 2023-24 ನೇ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ರೈತರ ಆಕ್ಷೇಪಣೆಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ದಿನಾಂಕ 17-05-2024 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ಮಾಹಿತಿ, ವಿಸ್ತೀರ್ಣದ ಮಾಹಿತಿ ಕುರಿತು ಬೆಳೆ ದರ್ಶಕ ಮೊಬೈಲ್ ಆಪ್ ಮೂಲಕ ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಬೆಳೆ ಸಮೀಕ್ಷೆ ದತ್ತಾಂಶವನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬೆಳೆ ವಿಮೆಗೆ ಸಂಬಂಧಿಸಿದ ಮಿಸ್‍ಮ್ಯಾಚ್ ಪ್ರಕರಣಗಳ ಇತ್ಯರ್ಥ, ಬೆಂಬಲ ಬೆಲೆಯಡಿ ರೈತರು ಮಾರಾಟ ಮಾಡಲು ನೇರ ನಗದು ವರ್ಗಾವಣೆ ಹಾಗೂ ಇತರೆ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮರ್ಪಕವಾಗಿ ಬಳಕೆ ಮಾಡುವುದರಿಂದ ರೈತರು ಬೆಳೆ ಸಮೀಕ್ಷೆಯಿಂದ ವಂಚಿತರಾಗದೇ ಇದರಲ್ಲಿ ಪಾಲ್ಗೊಂಡು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆಪ್ ಮೂಲಕ ಖಾತರಿ ಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ ಆಕ್ಷೇಪಣೆಗಳನ್ನು ದಿ.17-05-2024 ರೊಳಗೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read