HomeKarnatakaಬೇಸಿಗೆ ಬಂದೇ ಬಿಡ್ತು: ಕುಡಿಯುವ ನೀರಿನ ಸಮಸ್ಯೆ ಇಲ್ಲ

ಬೇಸಿಗೆ ಬಂದೇ ಬಿಡ್ತು: ಕುಡಿಯುವ ನೀರಿನ ಸಮಸ್ಯೆ ಇಲ್ಲ

ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ತಹಸೀಲ್ದಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮತ್ತು ನಗರಸ್ಥಳಿಯ ಸಂಸ್ಥೆಯ ಅಧಿಕಾರಿಗಳಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಕಳೆದ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳು ಮತ್ತು ನಗರ ಪ್ರದೇಶಗಳಲ್ಲಿ ಈ ಬಾರಿಯ ಬೇಸಿಗೆಯಲ್ಲಿ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳ ಪಟ್ಟಿಯನ್ನು ಸಿದ್ದಪಡಿಸಿ, ಈ ಪ್ರದೇಶದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ, ಖಾಸಗಿ ಬಾವಿಗಳು, ಬಾಡಿಗೆ ಬೋರ್ ವೆಲ್ ಗಳನ್ನು ಬಳಸಿಕೊಳ್ಳುವುದು, ಟ್ಯಾಂಕರ್ ಮೂಲಕ ನೀರಿ ಸರಬರಾಜು ಸೇರಿದಂತೆ ಇತರೇ ಅಗತ್ಯ ಪರ್ಯಾಯ ಕ್ರಮಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ” ನಿರ್ದೇಶನ ನೀಡಿದರು.

ಬೇಸಿಗೆ ಸಂದರ್ಭದಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಮಳೆಗಾಲದಲ್ಲಿ ನೆರೆ ಪ್ರವಾಹ ಉಂಟಾಗುವುದನ್ನು ತಡೆಯುವ ನಿಟ್ಟಿನಲ್ಲಿ ಈಗಿನಿಂದಲೇ ಅಗತ್ಯ ದುರಸ್ತಿ, ನಿರ್ಮಾಣ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುದಗಾ, ಬಿಣಗಾ, ಅರಗಾ, ಚೆಂಡಿಯಾ, ಇಡೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗಲು ಯಾವುದೇ ಅಡೆತಡೆಗಳು ಇಲ್ಲದಂತೆ ಅಗತ್ಯವಿರುವ ದುರಸ್ತಿ, ಡ್ರಜ್ಜಿಂಗ್ ಮತ್ತಿತರ ಕಾಮಗಾರಿಗಳನ್ನು ನಗರಸಭೆ, ಸಣ್ಣ ನೀರಾವರಿ ಇಲಾಖೆ ಮತ್ತು ತಹಸೀಲ್ದಾರ್ ಅವರು ಜಂಟಿಯಾಗಿ ಸ್ಥಳ ಪರಿಶೀಲಿಸಿ, ಅಗತ್ಯವಿರುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ವ್ಯಾಪಿಯಲ್ಲಿ ಮಳೆ ನೀರಿ ನಿಲ್ಲದಂತೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಮುಕ್ತಾಯಗೊಳಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿರುವ ಮಳೆ ಮಾಪನ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಿ, ಅವುಗಳನ್ನು ಸೂಕ್ತ ಸ್ಥಳದಲ್ಲಿ ಅಳವಡಿಸುವಂತೆ ಮತ್ತು ಕಾರ್ಯನಿರ್ವಹಿಸದೇ ಇರುವ ಯಂತ್ರಗಳನ್ನು ತಕ್ಷಣದಲ್ಲೇ ಬದಲಾಯಿಸಿ, ಹೊಸ ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವಂತೆಯೂ ತಿಳಿಸಿದರು.

ಜಿಲ್ಲೆಯಲ್ಲಿ ಗುಡ್ಡಕುಸಿತ ತಡೆಯಲು ಕೈಗೊಂಡಿರುವ ಕಾಮಗಾರಿಗಳಿಗೆ ಈಗಾಗಲೇ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದ್ದು, ಸಂಬಂಧಪಟ್ಟ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಇಲಾಖೆಗಳು ಕೂಡಲೇ ಟೆಂಡರ್ ಕರೆದು ನಿಗಧಿತ ಅವಧಿಯಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಮುಕ್ತಾಯಗೊಳಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಬೇಸಿಗೆಯಲ್ಲಿ ಉಷ್ಣಗಾಳಿ ಬೀಸುವ ಸಂಭವವಿದ್ದು ಈ ಬಗ್ಗೆ ಹವಾಮಾನ ಇಲಾಖೆಯಿಂದ ನೀಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಉಷ್ಣ ಅಲೆ ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಕ್ರಮಗಳ ಕುರಿತಂತೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular