BIG NEWS: ತಾಕತ್ತಿದ್ದರೆ ಕರಸೇವಕರನ್ನು ಬಂಧಿಸಿ; ಬಿಜೆಪಿ ಶಾಸಕ ಸುನೀಲ್ ಕುಮಾರ್ ಸವಾಲು

ಬೆಂಗಳೂರು: ಕರಸೇವಕರ ಬಂಧನವನ್ನು ಖಂಡಿಸಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ರಾವಣ ಮಾತ್ರವಲ್ಲ ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎಂಬುದನ್ನು ತೋರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್ ಕುಮಾರ್, ನಾನು ಪಟ್ಟಿ ಕೊಡುತ್ತೇನೆ. ಸರ್ಕಾರಕ್ಕೆ ತಾಕತ್ತಿದ್ದರೆ ಕರಸೇವಕರನ್ನು ಬಂಧಿಸಲಿ. ನಾನು ಕೂಡ ಕರಸೇವೆಯಲ್ಲಿ ಭಾಗಿಯಾಗಿದ್ದೆ ಎಂದು ಸವಾಲು ಹಾಕಿದ್ದಾರೆ.

ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ. ಸರ್ಕಾರ ಹಿಂದುತ್ವದ ಪರ, ಹಿಂದೂಗಳ ಭಾವನೆ ಇದ್ದರೆ ನೂರು ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಲಿ. ಜನವರಿ 22ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಮ್ಮ ಕುಟುಂಬ ಸದಸ್ಯರ ಜೊತೆ ಸೇರಿ ದೀಪ ಬೆಳಗಿಸಲಿ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read