HomeKarnataka24 ಗಂಟೆಯೊಳಗಾಗಿ ಚುನಾವಣಾ ಕಣದಿಂದ ನಿವೃತ್ತರಾಗಿ; ಇಲ್ಲವೇ ಶಿಸ್ತು ಕ್ರಮ ಎದುರಿಸಿ; ರಘುಪತಿ ಭಟ್ ಗೆ...

24 ಗಂಟೆಯೊಳಗಾಗಿ ಚುನಾವಣಾ ಕಣದಿಂದ ನಿವೃತ್ತರಾಗಿ; ಇಲ್ಲವೇ ಶಿಸ್ತು ಕ್ರಮ ಎದುರಿಸಿ; ರಘುಪತಿ ಭಟ್ ಗೆ ಶಾಸಕ ಸುನೀಲ್ ಕುಮಾರ್ ಎಚ್ಚರಿಕೆ

ಉಡುಪಿ: ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಶಾಸಕ ಸುನೀಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್ ಕುಮಾರ್, 24 ಗಂಟೆಯೊಳಗೆ ಚುನಾವಣಾ ಕಣದಿಂದ ನಿವೃತ್ತರಾಗಿ. ಇಲ್ಲವಾದಲ್ಲಿ ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಾರ್ನಿಂಗ್ ನೀಡಿದ್ದಾರೆ.

ರಘುಪತಿ ಭಟ್, ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕಣಕ್ಕಿಳಿದಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿ ಗೆಲುವಿಗೆ ಏನು ಬೇಕೋ ಅದನ್ನು ಪಕ್ಷದ ವತಿಯಿಂದ ನಾವು ಮಾಡುತ್ತೇವೆ. ರಘುಪತಿ ಭಟ್ ಆಗಲಿ, ಯಾರೇ ಆಗಲಿ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಿದರೆ ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಘುಪತಿ ಭಟ್ ಅವರಿಗೆ ಇನ್ನೂ ಕಾಲಾವಕಾಶವಿದೆ. ಅವರು ತಕ್ಷಣ ಚುನಾವಣಾ ಕಣದಿಂದ ನಿವೃತ್ತಿಯಾಗಬೇಕು ಎಂದು ಒತ್ತಾಯಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular