ಕಾರವಾರ: ಭಾರಿ ಮಳೆಯಿಂದಾಗಿ ಸೂಪಾ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದು, ಡ್ಯಾಂ ಭರ್ತಿಯಾಗಿದೆ. ಯಾವುದೇ ಕ್ಷಣದಲ್ಲಿ ಜಲಾಶಯದ ನೀರನ್ನು ಹೊರಬಿಡುವ ಸಾಧ್ಯತೆ ಇದೆ.
ಜಲಾಶಯದ ನೀರನ್ನು ಕಾಳಿ ನದಿಗೆ ಯಾವುದೇ ಕ್ಷಣದಲ್ಲಿ ಬಿಡಲಾಗುವುದು. ಈ ಹಿನ್ನೆಲೆಯಲ್ಲಿ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹವುಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೆಪಿಸಿಎಲ್ ಎಚ್ಚರಿಕೆ ಘೋಷಿಸಿದೆ.
ನದಿ ಪಾತ್ರದಲ್ಲಿರುವ ಗ್ರಾಮಸ್ಥರು ಹಾಗೂ ಜಲಾಷಯದ ಅಚ್ಚುಕಟ್ಟು ಪ್ರದೇಶದಲ್ಲಿರುವವರು ತಮ್ಮ ಜನ ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಮುನ್ಸೂಚನೆ ನೀಡಿದೆ.