HomeLatest Newsಸೂಪಾ ಡ್ಯಾಂ ಭರ್ತಿ: ಯಾವುದೇ ಕ್ಷಣದಲ್ಲಿ ನೀರು ಹೊರಬಿಡುವ ಸಾಧ್ಯತೆ: ನದಿ ಪಾತ್ರದ ಜನರಿಗೆ ಅಲರ್ಟ್...

ಸೂಪಾ ಡ್ಯಾಂ ಭರ್ತಿ: ಯಾವುದೇ ಕ್ಷಣದಲ್ಲಿ ನೀರು ಹೊರಬಿಡುವ ಸಾಧ್ಯತೆ: ನದಿ ಪಾತ್ರದ ಜನರಿಗೆ ಅಲರ್ಟ್ ಘೋಷಣೆ

ಕಾರವಾರ‍: ಭಾರಿ ಮಳೆಯಿಂದಾಗಿ ಸೂಪಾ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದು, ಡ್ಯಾಂ ಭರ್ತಿಯಾಗಿದೆ. ಯಾವುದೇ ಕ್ಷಣದಲ್ಲಿ ಜಲಾಶಯದ ನೀರನ್ನು ಹೊರಬಿಡುವ ಸಾಧ್ಯತೆ ಇದೆ.

ಜಲಾಶಯದ ನೀರನ್ನು ಕಾಳಿ ನದಿಗೆ ಯಾವುದೇ ಕ್ಷಣದಲ್ಲಿ ಬಿಡಲಾಗುವುದು. ಈ ಹಿನ್ನೆಲೆಯಲ್ಲಿ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹವುಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೆಪಿಸಿಎಲ್ ಎಚ್ಚರಿಕೆ ಘೋಷಿಸಿದೆ.

ನದಿ ಪಾತ್ರದಲ್ಲಿರುವ ಗ್ರಾಮಸ್ಥರು ಹಾಗೂ ಜಲಾಷಯದ ಅಚ್ಚುಕಟ್ಟು ಪ್ರದೇಶದಲ್ಲಿರುವವರು ತಮ್ಮ ಜನ ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular