HomeLatest Newsಮೂರು ತಿಂಗಳಿಂದ ಸಿಗದ ವೇತನ: ಗ್ರಂಥಾಲಯದಲ್ಲೇ ಮೇಲ್ವಿಚಾರಕಿ ಆತ್ಮಹತ್ಯೆ

ಮೂರು ತಿಂಗಳಿಂದ ಸಿಗದ ವೇತನ: ಗ್ರಂಥಾಲಯದಲ್ಲೇ ಮೇಲ್ವಿಚಾರಕಿ ಆತ್ಮಹತ್ಯೆ

ಕಲಬುರಗಿ: ಮೂರು ತಿಂಗಳಿನಿಂದ ವೇತನ ಪಾವತಿ ಆಗದ ಹಿನ್ನೆಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡಡ ಗ್ರಾಮದ ಗ್ರಂಥಾಲಯ ಮೇಲ್ವಿಚಾರಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ನಿಮಠ(40) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಮೂರು ತಿಂಗಳಿನಿಂದ ಸಂಬಳ ನೀಡದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು, ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ.

ಡೆತ್ ನೋಟ್ ನಲ್ಲಿ ಪಂಚಾಯಿತಿ ಅಧ್ಯಕ್ಷರು, ಅಧಿಕಾರಿಗಳ ಹೆಸರು ಪ್ರಸ್ತಾಪಿಸಿರುವ ಅವರು ಸಂಬಳ ನೀಡಿದ್ದಕ್ಕೆ ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದಾರೆ. ಮೂರು ತಿಂಗಳಿನಿಂದ ಅವರಿಗೆ ವೇತನ ಪಾವತಿ ಆಗಿರಲಿಲ್ಲ. ವೇತನ ನೀಡಲು ಅಧಿಕಾರಿಗಳು ಸತಾಯಿಸುತ್ತಿದ್ದರು. ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular