HomeKarnatakaBIG NEWS: ಎರಡು ಬಾರಿ ಔಷಧಗಳ ಗುಣಮಟ್ಟ ಪರಿಶೀಲಿಸಿದ ನಂತರವೇ ಸರ್ಕಾರಿ ಆಸ್ಪತ್ರೆಗೆ ಪೂರೈಕೆ

BIG NEWS: ಎರಡು ಬಾರಿ ಔಷಧಗಳ ಗುಣಮಟ್ಟ ಪರಿಶೀಲಿಸಿದ ನಂತರವೇ ಸರ್ಕಾರಿ ಆಸ್ಪತ್ರೆಗೆ ಪೂರೈಕೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಾ. ತಳವಾರ್ ಸಾಬಣ್ಣ ಮತ್ತು ಸಿ.ಟಿ. ರವಿ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಎರಡು ಬಾರಿ ಟೆಸ್ಟ್ ಮಾಡಿ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲಾಗುವುದು. ಜೊತೆಗೆ ಎರಡು-ಮೂರು ವರ್ಷಕ್ಕೆ ಒಂದು ಬಾರಿ ಔಷಧ ತಯಾರಿಕೆ ಕಂಪನಿಗೆ ಖುದ್ದಾಗಿ ತೆರಳಿ ತಪಾಸಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅಗತ್ಯ ಮತ್ತು ಇತರೆ ಔಷಧಗಳ ಸಂಖ್ಯೆಯನ್ನು 732 ರಿಂದ 1084ಕ್ಕೆ ಹೆಚ್ಚಳ ಮಾಡಲಾಗಿದೆ. ಕೆಲವು ಜೀವ ರಕ್ಷಕ ಔಷಧಗಳನ್ನು ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಪೂರೈಸಬೇಕಿರುವುದರಿಂದ ಟೆಂಡರ್ ಪ್ರಕ್ರಿಯೆಯಲ್ಲಿ ಹೆಚ್ಚು ಬಿಡ್ ದಾರರು ಭಾಗಿಯಾಗಿಲ್ಲ. ತುರ್ತು ಸಂದರ್ಭದಲ್ಲಿ ಅಗತ್ಯ ಪ್ರಮಾಣದಲ್ಲಿ ಔಷಧಗಳನ್ನು ತಮ್ಮ ಮಟ್ಟದಲ್ಲಿ ಸೂಕ್ತ ಪ್ರಾಧಿಕಾರದ ಅನುಮೋದನೆಯೊಂದಿಗೆ ಖರೀದಿಸಿ ಸಾರ್ವಜನಿಕರಿಗೆ ವಿತರಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular