HomeKarnatakaಬೇಸಿಗೆಯಲ್ಲಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ; ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆಯಲ್ಲಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು :   ಬೇಸಿಗೆಯಲ್ಲಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಮಾಡಲು ಗ್ಯಾರಂಟಿ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಜಲಮೂಲಗಳು ಬತ್ತಿಹೋಗಿರುವುದರಿಂದ ಹಾಗೂ ಕೊಳವೆ ಬಾವಿಗಳ ಇಳುವರಿ ಕಡಿಮೆಯಾಗುತ್ತಿರುವುದರಿಂದ ರಾಜ್ಯದ ಕೆಲವೊಂದು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುತ್ತದೆ. ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ದೇಶನ ನೀಡಲಾಗಿದೆ.

ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾದ ಸಂದರ್ಭಗಳಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ಪ್ರತಿ 2ನೇ ಹಾಗೂ 4ನೇ ಸೋಮವಾರದಂದು ಪಂಚಾಯತ್ ಅಭಿವೃದ್ಧಿ ಅಧಿಕಾರಗಳ ಜೊತೆಯಲ್ಲಿ ಕಡ್ಡಾಯವಾಗಿ ಕುಡಿಯುವ ನೀರಿನ ಸಮಸ್ಯೆ ಕುರಿತ ವಾಸ್ತವ ಸ್ಥಿತಿಯ ಬಗ್ಗೆ ಸಭೆ ನಡೆಸಲು ಹಾಗೂ ಪ್ರತಿ 2ನೇ ಹಾಗೂ 4ನೇ ಮಂಗಳವಾರದಂದು ಪತ್ರಿಕಾ ಗೋಷ್ಠಿ ಕರೆದು ಜಿಲ್ಲೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಡಿಯುವ ನೀರಿನ ಅಭಾವ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲಿ 24/7 ನಿಯಂತ್ರಣ ಕೊಠಡಿಗಳನ್ನು ತೆರೆದು, ಸಿಬ್ಬಂದಿಗಳನ್ನು ನಿಯೋಜಿಸಲು ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯಾನಿರ್ವಾಹಕ ಅಧಿಕಾರಿಗಳ ಮುಖಾಂತರ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ತಿಳಿಸಲಾಗಿದೆ.

ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿನ ನೀರಿನ ಮೂಲಗಳನ್ನು ಶೇ.100ರಷ್ಟು ಭೌತಿಕ ಪರಿಶೀಲನೆ ನಡೆಸಿ, ಕೊಳವೆಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಹಾಗೂ ಕಲುಷಿತ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯನ್ನು ಕೈಗೊಂಡು, ಕೊಳವೆಬಾವಿ ಸುತ್ತ ಕಾಂಕ್ರೀಟ್’ನಿಂದ ಕಟ್ಟೆಯನ್ನು ಕಟ್ಟಿ, ಕಲುಷಿತ ನೀರು ಕೊಳವೆಬಾವಿಗೆ ಸೇರದಂತೆ ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನೀರಿನ ಮೂಲಗಳ ಸುರಕ್ಷತೆಯನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಹಾಗೂ ಕುಡಿಯುವ ನೀರಿನ ಅಭಾವ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮಸ್ಥರಿಗೆ ಅಗತ್ಯ ಜಾಗೃತಿ ಮೂಡಿಸಲು ಸಹ ಸೂಚನೆಗಳನ್ನು ನೀಡಲಾಗಿದೆ. ಬೇಸಿಗೆಯಲ್ಲಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಮಾಡಲು ಗ್ಯಾರಂಟಿ ಸರ್ಕಾರ ಬದ್ಧವಾಗಿದೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular