HomeKarnatakaBIG NEWS : ‘ಕಳಪೆ ಮೊಟ್ಟೆ’ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಿ :...

BIG NEWS : ‘ಕಳಪೆ ಮೊಟ್ಟೆ’ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಿ : ಅಧಿಕಾರಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

ಬೆಂಗಳೂರು : ‘ಕಳಪೆ ಮೊಟ್ಟೆ’ ಪೂರೈಕೆ ಮಾಡಿದ್ರೆ ಕಪ್ಪು ಪಟ್ಟಿಗೆ ಸೇರಿಸುತ್ತೇನೆ ಎಂದು ವಿತರಕರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಡಕ್ ಸೂಚನೆ ನೀಡಿದರು.

ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಮೊಟ್ಟೆ ಪೂರೈಕೆ ಕುರಿತು ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು . ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡುತ್ತಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು , ಸಪ್ಲೈ ಲಿಸ್ಟ್ ನಿಂದಲೂ ಕೈ ಬಿಡುವಂತೆ ಸೂಚನೆ ನೀಡಿದ್ದೇನೆ ಎಂದರು.

ಖರೀದಿ ವಿಕೇಂದ್ರೀಕರಣ ಮಾಡಿದ ಕಾರಣದಿಂದ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿ ಆಗುತ್ತಿದೆ. ಯಾವುದೇ ಕಂಟ್ರೋಲ್ ಇಲ್ಲದೆ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶವಾಗಿದೆ.ಕಳಪೆ ಮೊಟ್ಟೆ ವಿತರಣೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ. ವಿಕೇಂದ್ರೀಕರಣ ಮಾದರಿಯ ಖರೀದಿಯಿಂದ ಪ್ರಾಮಾಣಿಕ ಪೂರೈಕೆ ಆಗ್ತಿಲ್ಲ. ಈ ನಿಟ್ಟಿನಲ್ಲಿ ಖರೀದಿ ವ್ಯವಸ್ಥೆ ಕೇಂದ್ರೀಕರಣ ಮಾಡಲು ಕ್ರಮವಹಿಸಲಾಗುವುದು. ಜತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ ಕುರಿತು ನಿಗಾವಹಿಸುವುದಾಗಿ ತಿಳಿಸಿದೆ. ಸರ್ಕಾರದ ಸಂಸ್ಥೆಗಳಿಂದ ಖರೀದಿಗೆ ಚಿಂತನೆ ನಡೆಯುತ್ತಿದ್ದು, ಎಲ್ಲಾ ಪ್ರಸ್ತಾಪಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular