5, 8, 9ನೇ ತರಗತಿ ಪರೀಕ್ಷೆ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರುಪ್ಸಾ ನಿರ್ಧಾರ

ಬೆಂಗಳೂರು: 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ.

ಏಕಸದಸ್ಯ ಪೀಠ ಈ ಹಿಂದೆ ನೀಡಿದ್ದ ಆದೇಶ ರದ್ದುಗೊಳಿಸಿ ವಿಭಾಗಿಯ ಪೀಠ ಆದೇಶ ನೀಡಿದೆ. ಏಕಸದಸ್ಯ ಪೀಠದ ಆದೇಶವನ್ನು ಈ ಹಿಂದೆ ಪ್ರಶ್ನಿಸಿದ್ದ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆ ನಡೆಸಲು ಅಸ್ತು ಎಂದಿದೆ.

ಸೋಮವಾರದಿಂದ ಪರೀಕ್ಷೆ ನಡೆಸುವ ಬಗ್ಗೆ ನ್ಯಾಯಾಲಯಕ್ಕೆ ಸರ್ಕಾರ ಮಾಹಿತಿ ನೀಡಿದೆ. ಈಗಾಗಲೇ ಎರಡು ವಿಷಯಗಳ ಪರೀಕ್ಷೆ ಪೂರ್ಣಗೊಂಡಿದ್ದು, ಉಳಿದ ವಿಷಯಗಳ ಪರೀಕ್ಷೆ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ವೇಳಾಪಟ್ಟಿ ಶೀಘ್ರವೇ ಪ್ರಕಟಿಸಲಿದೆ. ಇದರೊಂದಿಗೆ ಬೋರ್ಡ್ ಪರೀಕ್ಷೆ ಕುರಿತಾದ ಗೊಂದಲಕ್ಕೆ ತೆರೆ ಬಿದ್ದಿದೆ. ಸೋಮವಾರದಿಂದ 5, 8, 9ನೇ ತರಗತಿಯ ಉಳಿದ ವಿಷಯಗಳ ಪರೀಕ್ಷೆಗಳು ಆರಂಭವಾಗುವ ನಿರೀಕ್ಷೆ ಇದೆ.

5, 8, 9ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸಬಾರದು. ಶಾಲಾ ಹಂತದಲ್ಲಿಯೇ ಎಸ್ಎ 2 ನಡೆಸಬೇಕು ಎಂಬುದು ರುಪ್ಸಾ(ಖಾಸಗಿ ಶಾಲೆಗಳ ಒಕ್ಕೂಟ) ವಾದವಾಗಿದೆ. ಈ ಕುರಿತಾಗಿ ಒಕ್ಕೂಟ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಲು ಚಿಂತನೆ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈ ಹಿಂದೆ ಕೂಡ ರುಪ್ಸಾ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಪರೀಕ್ಷೆ ನಡೆಸಲು ತಡೆಯಾಜ್ಞೆ ನೀಡಿದ್ದ ಸುಪ್ರೀಂಕೋರ್ಟ್ ಈ ಬಗ್ಗೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಸ್ತೃತ ವಿಚಾರಣೆಗೆ ಸೂಚನೆ ನೀಡಿತ್ತು. ಈಗ ಹೈಕೋರ್ಟ್ ವಿಭಾಗೀಯ ಪೀಠ ಪರೀಕ್ಷೆಗೆ ಅಸ್ತು ಎಂದಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್ ನೀಡಿರುವ ಆದೇಶ ಸ್ವೀಕರಿಸುತ್ತೇವೆ. ನಂತರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಹೇಳಿದ್ದಾರೆ.

ಬೋರ್ಡ್ ಪರೀಕ್ಷೆ ನಡೆಸದೆ ಶಾಲಾ ಹಂತದಲ್ಲಿ ಎಸ್ಎ 2 ನಡೆಸುವಂತೆ ವಾದ ಮಂಡಿಸಿದ್ದೆವು. ಈಗಲೂ ನಮಗೆ ನ್ಯಾಯ ಸಿಗಲಿದೆ ಎನ್ನುವ ನಂಬಿಕೆ ಇದೆ. ಈಗ ಹೈಕೋರ್ಟ್ ನೀಡಿದ ಆದೇಶ ಸ್ವೀಕರಿಸುತ್ತೇವೆ. ನಂತರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read