HomeKarnatakaಜಯನಗರ ಬಿಜೆಪಿ ಶಾಸಕರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ!

ಜಯನಗರ ಬಿಜೆಪಿ ಶಾಸಕರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ!

ಜಯನಗರ 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಭಾರೀ ಸುದ್ದು, ಸುದ್ದಿ ಮಾಡಿದ್ದ ಕ್ಷೇತ್ರ. ಬೆಂಗಳೂರು ನಗದ ವ್ಯಾಪ್ತಿಯ ಈ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಕೆ.ರಾಮಮೂರ್ತಿ 57,797 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಆದರೆ ಜಯನಗರ ಕ್ಷೇತ್ರದ ಮತ ಎಣಿಕೆ ಸರಿಯಾಗಿ ನಡೆದಿಲ್ಲ ಎಂದು ಸಿ.ಕೆ.ರಾಮಮೂರ್ತಿ ಪ್ರತಿಸ್ಪರ್ಧಿ, ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ಆರೋಪಿಸಿದ್ದರು. ಅವರು ಚುನಾವಣೆಯಲ್ಲಿ 57,781 ಮತಗಳನ್ನು ಪಡೆದು ಸೋಲು ಕಂಡಿದ್ದರು.

ಕೋರ್ಟ್‌ನಲ್ಲಿ ಸೌಮ್ಯಾ ರೆಡ್ಡಿ ಅವರು ಜಯನಗರ ಮತ ಎಣಿಕೆ ಸರಿಯಾಗಿ ನಡೆದಿಲ್ಲ. ಪುನಃ ಎಣಿಕೆ ನಡೆಸಬೇಕು ಎಂದು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದರ ವಿರುದ್ಧ ಶಾಸಕ ಸಿ.ಕೆ.ರಾಮಮೂರ್ತಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೌಮ್ಯಾ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ಟ್ರಯಲ್‌ಗೆ ತಡೆ ನೀಡಬೇಕು ಎಂದು ಕೋರಿ ಸಿ.ಕೆ.ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ವಿಕ್ರಮನಾಥ್ ಅವರಿದ್ದ ಪೀಠ ಈ ಕುರಿತು ಆದೇಶವನ್ನು ನೀಡಿದೆ.

ಮತ ಎಣಿಕೆ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಸರಿಯಾದ ನಿಯಮ ಪಾಲನೆ ಮಾಡಿಲ್ಲ ಎಂದು ಸೌಮ್ಯಾ ರೆಡ್ಡಿ ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ತಡೆ ನೀಡಬೇಕು ಎಂದು ಸಿ.ಕೆ.ರಾಮಮೂರ್ತಿ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಆದ್ದರಿಂದ ಸಿ.ಕೆ.ರಾಮಮೂರ್ತಿ ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ ಕೋರ್ಟ್ ಅರ್ಜಿ ವಜಾಗೊಳಿಸಿದೆ. ಜಯನಗರ ಫಲಿತಾಂಶದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಜಟಾಪಟಿ ನಡೆಯುತ್ತಲೇ ಇದೆ.

ಮೊದಲು ಗೆದ್ದಿದ್ದ ಸೌಮ್ಯಾ ರೆಡ್ಡಿ: ಜಯನಗರ ಕ್ಷೇತ್ರದ ಮೊದಲ ಹಂತದ ಎಣಿಕೆಯಲ್ಲಿ ಸೌಮ್ಯಾ ರೆಡ್ಡಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದರು. ಆದರೆ ಫಲಿತಾಂಶದ ಕುರಿತು ಗೊಂದಲ ಉಂಟಾದ ಕಾರಣ ಮರು ಎಣಿಕೆ ಮಾಡಲಾಗಿತ್ತು.

ಆಗ ಬಿಜೆಪಿಯ ಸಿ.ಕೆ.ರಾಮಮೂರ್ತಿ ಗೆಲುವು ಸಾಧಿಸಿದ್ದರು. ಸೌಮ್ಯಾ ರೆಡ್ಡಿ ಮತ ಎಣಿಕೆ ಕೇಂದ್ರದಿಂದ ಕಣ್ಣೀರು ಹಾಕುತ್ತಾ ಹೊರ ಹೋಗಿದ್ದರು. ಬಳಿಕ ಅವರು ಚುನಾವಣಾ ಆಯೋಗದ ಆದೇಶದಂತೆ ಎಣಿಕೆ ಆಗಿಲ್ಲ. ಮರು ಮತ ಎಣಿಕೆ ನಿಯಮ ಬಾಹಿರವಾಗಿ ಆಗಿದೆ ಎಂದು ಆರೋಪಿಸಿದ್ದರು.

837 ಅಂಚೆ ಮತಗಳ ಮರು ಎಣಿಕೆ ಆಗಬೇಕು. ಮತ ಎಣಿಕೆಯ ವಿಡಿಯೋ ಚಿತ್ರೀಕರಣವನ್ನು ಪರಿಶೀಲನೆ ನಡೆಸಬೇಕು ಎಂದು ಸೌಮ್ಯಾ ರೆಡ್ಡಿ ಕಾನೂನು ಹೋರಾಟ ಮಾಡುತ್ತಿದ್ದಾರೆ. ಇದಕ್ಕೆ ತಡೆ ನೀಡಬೇಕು ಎಂದು ಸಿ.ಕೆ.ರಾಮಮೂರ್ತಿ ಅರ್ಜಿ ಸಲ್ಲಿಸಿದ್ದರು.

ಸೌಮ್ಯಾ ರೆಡ್ಡಿ ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ. 2018ರ ಚುನಾವಣೆಯಲ್ಲಿ ಅವರು 54,458 ಮತಗಳನ್ನು ಪಡೆದು ಜಯಗನಗರ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದರು.

2018ರಲ್ಲಿ ಕ್ಷೇತ್ರವನ್ನು ಕಳೆದುಕೊಂಡಿದ್ದ ಬಿಜೆಪಿ 2023ರ ಚುನಾವಣೆಯಲ್ಲಿ ಸಿ.ಕೆ.ರಾಮಮೂರ್ತಿ ಅವರನ್ನು ಕಣಕ್ಕಿಳಿಸುವ ಮೂಲಕ ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ಪಡೆದುಕೊಂಡಿತ್ತು. ಆದರೆ ಜಯನಗರದ ಫಲಿತಾಂಶದ ವಿಚಾರದಲ್ಲಿ ಇನ್ನೂ ಸಹ ಕಾನೂನು ಹೋರಾಟ ನಡೆಯುತ್ತಿದೆ.

ವಿಧಾನಸಭೆ ಚುನಾವಣೆಯಲ್ಲಿ ಸೋತರು ಪಕ್ಷ ಸೌಮ್ಯಾ ರೆಡ್ಡಿ ಅವರಿಗೆ ಮಹತ್ವದ ಜವಾಬ್ದಾರಿಯನ್ನು ನೀಡಿದೆ. ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಅವರನ್ನು ನೇಮಿಸಲಾಗಿದೆ. ಪಕ್ಷ ಸಂಘಟನೆ ಕೆಲಸಗಳನ್ನು ಮಾಡಲು ನಿಯೋಜಿಸಿದೆ. ಜಯನಗರ ಕ್ಷೇತ್ರದ ಫಲಿತಾಂಶದ ಕುರಿತ ಕಾನೂನು ಹೋರಾಟದಲ್ಲಿ ಯಾರಿಗೆ ಜಯ ಸಿಗಲಿದೆ? ಎಂದು ಕಾದು ನೋಡಬೇಕಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular