‘ರಾಮಸೇತು’ ಸ್ಮಾರಕ ಘೋಷಣೆಗೆ ಮನವಿ; ಮಧ್ಯ ಪ್ರವೇಶಕ್ಕೆ ‘ಸುಪ್ರೀಂ’ ನಿರಾಕರಣೆ

ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಹಿಂದೂ ವೈಯಕ್ತಿಕ ಕಾನೂನು ಮಂಡಳಿಯ ಅಧ್ಯಕ್ಷ ಅಶೋಕ್ ಪಾಂಡೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್, ತಿರಸ್ಕರಿಸಿದೆ.

ಮಂಗಳವಾರದಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಸುಧಾಂಶು ಧುಲಿಯಾ ಅವರಿದ್ದ ವಿಭಾಗಿಯ ನ್ಯಾಯ ಪೀಠ, ಈ ವಿಚಾರ ಸರ್ಕಾರದ ಆಡಳಿತಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಹೀಗಾಗಿ ನ್ಯಾಯಾಲಯ ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇನ್ನು ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವೆಂದು ಘೋಷಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಹ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಇನ್ನೂ ನಡೆಯಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read