
ಮಂಗಳವಾರದಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಸುಧಾಂಶು ಧುಲಿಯಾ ಅವರಿದ್ದ ವಿಭಾಗಿಯ ನ್ಯಾಯ ಪೀಠ, ಈ ವಿಚಾರ ಸರ್ಕಾರದ ಆಡಳಿತಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಹೀಗಾಗಿ ನ್ಯಾಯಾಲಯ ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಇನ್ನು ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವೆಂದು ಘೋಷಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಹ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಇನ್ನೂ ನಡೆಯಬೇಕಿದೆ.

