ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಮಾಡಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಪ್ರಶ್ನಿಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪುತ್ತೂರು ಉಪ ವಿಭಾಗಾಧಿಕಾರಿಗಳು 2026ರ ಮಾರ್ಚ್ 13ರಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಮಾಡಿ ಮೂರನೇ ಬಾರಿಗೆ ಆದೇಶ ಹೊರಡಿಸಿದ್ದರು. ಅವರ ಮೇಲೆ 32ಕ್ಕೂ ಹೆಚ್ಚು ಪ್ರಕರಣಗಳಿದ್ದು, ಕಾನೂನು ಸವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕ್ರಮ ಕೈಗೊಂಡಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಮಹೇಶ್ ಶೆಟ್ಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಏಕ ಸದಸ್ಯ ಪೀಠ ಮತ್ತು ವಿಭಾಗೀಯ ಪೀಠಗಳು ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿಯನ್ನು ತಿರಸ್ಕರಿಸಿದ್ದು, ಹೀಗಾಗಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕುಮಾರ್ ಹಾಗೂ ನ್ಯಾಯಮೂರ್ತಿ ಸಂಜೀವ್ ಸಚ್ ದೇವ್ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ವಿಭಾಗೀಯಪೀಠ ಅರ್ಜಿ ವಿಚಾರಣೆಗೆ ನಿರಾಕರಿಸಿ ಕಾನೂನು ಪ್ರಕಾರ ಸೂಕ್ತ ಸಕ್ಷಮ ಪ್ರಾಧಿಕಾರ ಸಂಪರ್ಕಿಸುವಂತೆ ನಿರ್ದೇಶಿಸಿದೆ.

