HomeIndiaರಾಜ್ಯದ ಇತರೆಡೆಯೂ ಕಂಬಳಕ್ಕೆ ಅನುಮತಿ: ಪೆಟಾ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ರಾಜ್ಯದ ಇತರೆಡೆಯೂ ಕಂಬಳಕ್ಕೆ ಅನುಮತಿ: ಪೆಟಾ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕ ಇತರೆ ಭಾಗಗಳಲ್ಲಿಯೂ ಕಂಬಳ ನಡೆಸುವುದನ್ನು ಪ್ರಶ್ನಿಸಿ ಪೆಟಾ ಸ್ವಯಂಸೇವಾ ಸಂಸ್ಥೆ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಕರ್ನಾಟಕ ಹೈಕೋರ್ಟ್ ನವೆಂಬರ್ 14ರ ಆದೇಶ ಪ್ರಶ್ನಿಸಿ ಪೆಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ ಕಂಬಳ ಕ್ರೀಡೆಯನ್ನು ರಾಜ್ಯದ ಒಂದೊಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕೆಂದು ಪ್ರಶ್ನಿಸಿದೆ.

ಕಂಬಳ ಸಮಿತಿಯರು ರಾಜ್ಯದ ವಿವಿಧ ಕಡೆಗಳಲ್ಲಿ ಸಂಸ್ಕೃತಿ ಪ್ರದರ್ಶಿಸಲು ಬಯಸಿದರೆ ತಪ್ಪೇನು? ರಾಜ್ಯದ ಇತರ ಜನರು ಕೂಡ ಈ ಸಂಸ್ಕೃತಿಯ ಪರಿಚಯ ಹೊಂದಲಿ ಎಂದು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅಭಿಪ್ರಾಯಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೆಟಾ ವಕೀಲರು ನಿರ್ದಿಷ್ಟ ಪ್ರದೇಶ ಹೊರತಾಗಿ ಇತರೆ ಭಾಗದಲ್ಲಿ ಕಂಬಳ ಆಯೋಜಿಸುವುದನ್ನು ಒಪ್ಪುವಂತಹುದಲ್ಲ. ರಾಜ್ಯ ಸರ್ಕಾರ ಸಲ್ಲಿಸಿದ ಪ್ರಮಾಣ ಪತ್ರದ ಅನುಸಾರ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾತ್ರವೇ ಕಂಬಳ ಆಯೋಜಿಸಬೇಕಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡಬಾರದು. ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಪೆಟಾ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತ್ತು. ಸುಮಾರು 300 ಕಿಲೋಮೀಟರ್ ದೂರದಿಂದ ಟ್ರಕ್ ನಲ್ಲಿ ತರುವ ದಣಿದ ಕೋಣಗಳನ್ನು ಸ್ಪರ್ಧೆಗೆ ಇಳಿಸಲಾಗುತ್ತದೆ. ಇದು ಪ್ರಾಣಿ ಹಿಂಸೆಗೆ ಕಾರಣವಾಗುತ್ತದೆ. ಹೀಗಾಗಿ ಕೋರ್ಟ್ ನಿರ್ಧರಿಸುವವರೆಗೆ ಕೋಣಗಳನ್ನು ಬೆಂಗಳೂರಿಗೆ ಟ್ರಕ್ ನಲ್ಲಿ ತರಬಾರದು ಎಂದು ಆಯೋಜನೆ ಸಮಿತಿಗೆ ಆದೇಶಿಸಬೇಕೆಂದು ಕೋರಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular