ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಹಾಗೂ ಇತರರಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದ್ದು ಆದೇಶ ಕಾಯ್ದಿರಿಸಿದೆ.
ನಟ ದರ್ಶನ್ ಕೇಸ್ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಆಶಾಕಿರಣವಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ
“ಭಾರತದ ಸಾಮಾನ್ಯ ಜನರಿಗೆ ಎಸ್‌ಸಿ ಒಂದು ಆಶಾಕಿರಣ- ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ” ಎಂದು ಪೋಸ್ಟ್ ಹಾಕಿದ್ದಾರೆ.
SC is a ray of hope for the common people of India- justice for the family of Renukaswamy 🤞🏽https://t.co/Qr0biXBYgY pic.twitter.com/wSSi3klhTv
— Ramya/Divya Spandana (@divyaspandana) July 24, 2025