HomeEntertainmentನಟ ದರ್ಶನ್ ಗೆ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ...

ನಟ ದರ್ಶನ್ ಗೆ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅರ್ಜಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ದರ್ಶನ್ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 2024ರ ಜೂನ್ 11ರಂದು ದರ್ಶನ್ ಬಂಧಿಸಲಾಗಿತ್ತು. 2024ರ ಅಕ್ಟೋಬರ್ 30ರಂದು ವೈದ್ಯಕೀಯ ಚಿಕಿತ್ಸೆಗಾಗಿ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ನಂತರ 2024ರ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್ ಸೇರಿ 7 ಮಂದಿ ಆರೋಪಿಗಳಿಗೆ ನಿಯಮಿತ ಜಾಮೀನು ಮಂಜೂರು ಮಾಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಪ್ರೀಂಕೋರ್ಟ್ ದರ್ಶನ್ ಅವರ ಜಾಮೀನು ರದ್ದು ಮಾಡಿದಲ್ಲಿ ಕೂಡಲೇ ಬಂಧನವಾಗಿ ಜೈಲು ಸೇರಬೇಕಾಗುತ್ತದೆ. ನಂತರ ಸುಪ್ರೀಂಕೋರ್ಟ್ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಿ ದರ್ಶನ್ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular