BREAKING : ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ : ‘CM ಸಿದ್ದರಾಮಯ್ಯ’ಗೆ ಸುಪ್ರೀಂಕೋರ್ಟ್’ನಿಂದ ನೋಟಿಸ್ ಜಾರಿ.!

ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಮೊದಲು ಕರ್ನಾಟಕ ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು, ನಂತರ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೆ ಶಂಕರ್ ಎಂಬುವವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆಎಂ ಶಂಕರ್ ಅವರು ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಅವರು, ಜನತೆಗೆ ಹಲವಾರು ಗ್ಯಾರಂಟಿಗಳ ಆಮಿಷವನ್ನು ಒಡ್ಡುವ ಮೂಲಕ ಸಿದ್ದರಾಮಯ್ಯನವರು 2023ರ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮತದಾರರಿಗೆ ಆಮಿಷ ನೀಡಿ ಮತದಾರರನ್ನು ಆಕರ್ಷಿಸುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾದದ್ದು. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನುಅಸಿಂಧುಗೊಳಿಸಬೇಕೆಂದು ಅವರು ಮನವಿಯಲ್ಲಿ ನ್ಯಾಯಾಲಯವನ್ನು ಕೇಳಿಕೊಂಡಿದ್ದರು.

ಈ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ನ್ಯಾ.ವಿಕ್ರಮನಾಥ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ಕೈಗೆತ್ತಿಕೊಂಡಿದ್ದು, ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read