HomeLatest Newsಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಮುಧೋಳದ ನಿರಾಣಿ ಶುಗರ್ಸ್ ನ ಡಿಸ್ಟಿಲರಿ ಘಟಕದ ಇಟಿಪಿ ಬಾಯ್ಲರ್ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮುರುಗೇಶ್ ನಿರಾಣಿ ಅವರ ಪುತ್ರ ವಿಜಯ್ ನಿರಾಣಿ ಮತ್ತು ಇತರರ ವಿರುದ್ಧ ತನಿಖೆ ನಡೆಸಲು ಸುಪ್ರೀಂಕೋರ್ಟ್ ಮಂಗಳವಾರ ಅವಕಾಶ ನೀಡಿದೆ.

ಕರ್ನಾಟಕ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ರದ್ದುಗೊಳಿಸಿ 2023ರಲ್ಲಿ ನೀಡಿದ ಆದೇಶವನ್ನು ನ್ಯಾಯಮೂರ್ತಿಗಳದ ಸಂಜಯ್ ಕರೋಲ್ ಮತ್ತು ದೀಪಕ್ ಮೆಹ್ತಾ ಅವರ ಪೀಠ ರದ್ದುಗೊಳಿಸಿದೆ.

ವಿಜಯ್ ನಿರಾಣಿ ವಿರುದ್ಧದ ಕಾನೂನು ಕ್ರಮಗಳಿಗೆ ಹೈಕೋರ್ಟ್ ತಡೆ ನೀಡಿದ್ದು, ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದ್ದು, ವಿಜಯ್ ನಿರಾಣಿ ವಿರುದ್ಧ ಕಾನೂನು ರೀತಿ ತನಿಖೆಗೆ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರದ ಪರವಾಗಿ ವಕೀಲ ಡಿ.ಎಲ್. ಚಿದಾನಂದ ಸಲ್ಲಿಸಿದ ಮನವಿಯ ಆಧಾರದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯ ಪೀಠ ವಿಚಾರಣೆ ನಡೆಸಲು ಅನುಮತಿ ಅಗತ್ಯವಿಲ್ಲ ಎಂದು ತಿಳಿಸಿದೆ. ಮುಂದಿನ ವಿಚಾರಣೆಗೆ ಈ ವಿಷಯವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂತಿರುಗಿಸಲಾಗಿದೆ. 2019 ರಲ್ಲಿ ಕಂಪನಿಯ ನಿರ್ದೇಶಕ ವಿಜಯ್ ನಿರಾಣಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular