HomeKarnatakaBIG NEWS: ಜಿಲ್ಲಾ ವಕೀಲರ ಸಂಘದಲ್ಲಿ ಮಹಿಳೆಯರಿಗೆ ಶೇ. 30ರಷ್ಟು ಹುದ್ದೆ ಮೀಸಲು: ಸುಪ್ರೀಂ ಕೋರ್ಟ್...

BIG NEWS: ಜಿಲ್ಲಾ ವಕೀಲರ ಸಂಘದಲ್ಲಿ ಮಹಿಳೆಯರಿಗೆ ಶೇ. 30ರಷ್ಟು ಹುದ್ದೆ ಮೀಸಲು: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಕರ್ನಾಟಕದ ಜಿಲ್ಲಾ ನ್ಯಾಯಾಲಯಗಳ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿಯಲ್ಲಿ ಶೇಕಡ 30ರಷ್ಟು ಹುದ್ದೆಗಳ ಜೊತೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಕಾಯ್ದಿರಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಈ ಹಿಂದೆ ಬೆಂಗಳೂರು ವಕೀಲರ ಸಂಘದಲ್ಲಿ ಮಹಿಳಾ ವಕೀಲರಿಗೆ ಖಜಾಂಚಿ ಹುದ್ದೆ ಸೇರಿ ಮೀಸಲಾತಿ ನೀಡಿ ಜನವರಿ 24 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ರಾಜ್ಯದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೂ ಇದು ಅನ್ವಯಿಸಲಿದೆ. ಜಿಲ್ಲಾ ವಕೀಲರ ಸಂಘದಲ್ಲಿ ಮಹಿಳೆಯರಿಗೆ ಶೇ. 30ರಷ್ಟು ಹುದ್ದೆ ಮೀಸಲಿಡಬೇಕು ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರ ಪೀಠ ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವಿಧ ಚುನಾಯಿತ ವಕೀಲರ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಕಲ್ಪಿಸುವುದು ಈ ಸಮಯದಲ್ಲಿ ಅಗತ್ಯವಾಗಿದೆ. ಕಾನೂನುಗಳಲ್ಲಿ ಈ ಕುರಿತ ನಿಬಂಧನೆಗಳಿಲ್ಲ ಎಂದು ನ್ಯಾಯಪೀಠ ಹೇಳಿದ್ದು, 140ನೇ ವಿಧಿಯ ಅಡಿಯಲ್ಲಿ ಮೀಸಲಾತಿ ಆದೇಶ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular