BIG NEWS: ಮಸೀದಿಗಳು ಸೇರಿ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್: ಉತ್ತರಿಸಲು ಕೇಂದ್ರಕ್ಕೆ ಆದೇಶ

ನವದೆಹಲಿ: ಮಸೀದಿಗಳ ಸರ್ವೆಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಸುಪ್ರೀಂಕೋರ್ಟ್ ಗುರುವಾರ ಬ್ರೇಕ್ ಹಾಕಿದ್ದು, ಪೂಜಾ ಸ್ಥಳಗಳ ಕಾಯ್ದೆಯ ಕೆಲವು ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ನಿರ್ದೇಶನ ನೀಡಿದೆ.

ಆರಾಧನಾ ಸ್ಥಳಗಳ ಕಾಯ್ದೆ 1991ರ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಧಾರ್ಮಿಕ ಸ್ಥಳವೊಂದರ ಧಾರ್ಮಿಕ ಸ್ವರೂಪವನ್ನು ವಿವಾದವನ್ನಾಗಿಸುವ ಪ್ರಕರಣಗಳಲ್ಲಿ ಸಮೀಕ್ಷೆ ಸೇರಿ ಯಾವುದೇ ಪರಿಣಾಮಕಾರಿ ಆದೇಶ ಹೊರಡಿಸದಂತೆ ವಿಚಾರಣಾ ನ್ಯಾಯಾಲಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಧಾರ್ಮಿಕ ಸ್ವರೂಪ ದಾವೆಗಳಲ್ಲಿ ಅಸ್ತಿತ್ವದಲ್ಲಿರುವ ಧಾರ್ಮಿಕ ರಚನೆಗಳ ವಿರುದ್ಧ ಆದೇಶ ಅಥವಾ ಸಮೀಕ್ಷೆ ನಡೆಸಲು ಆದೇಶಿಸಬಾರದು. ಮುಂದಿನ ಆದೇಶದ ವರೆಗೆ ದೇಶದಲ್ಲಿ ಪೂಜಾ ಸ್ಥಳಗಳ ವಿರುದ್ಧ ಯಾವುದೇ ದಾಖಲೆಗಳನ್ನು ದಾವೆಗಳನ್ನು ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನ ನೇತೃತ್ವದ ನ್ಯಾ. ಪಿ.ವಿ. ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠ ಈ ಮಹತ್ವದ ಆದೇಶ ನೀಡಿದೆ. ಕೇಂದ್ರ ಸರ್ಕಾರ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವವರೆಗೆ ಈ ವಿಷಯವನ್ನು ನಿರ್ಧರಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read