ನವದೆಹಲಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಪ್ರಸಾರ ತಡೆ ತೆರವಿಗೆ ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಮೊದಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಪ್ರಸಾರ ಮಾಡದಂತೆ ಬೆಂಗಳೂರು ಕೋರ್ಟ್ ಮಾಧ್ಯಮಗಳಿಗೆ ಆದೇಶಿಸಿದ್ದು, ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮೊದಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಎಂದು ತಿಳಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟಿರುವ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ದೇವಸ್ಥಾನ ಮತ್ತು ಅದನ್ನು ನಿರ್ವಹಿಸುತ್ತಿರುವ ಕುಟುಂಬದ ವಿರುದ್ಧ ಪ್ರಸಾರವಾಗುತ್ತಿರುವ ಸುದ್ದಿಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್ ಆದೇಶಿಸಿತ್ತು. ಈ ಕುರಿತ 9 ಸಾವಿರ ಲಿಂಕ್ ಗಳು, ವರದಿಗಳನ್ನು ಅಂತರ್ಜಾಲದಿಂದ ತೆಗೆಯಲು 390 ಮಾಧ್ಯಮಗಳಿಗೆ ಸೂಚನೆ ನೀಡಲಾಗಿತ್ತು.
ಇದನ್ನು ಪ್ರಶ್ನಿಸಿ ಥರ್ಡ್ ಐ ಯೂಟ್ಯೂಬ್ ಚಾನೆಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ಅರ್ಜಿ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್, ನ್ಯಾಯಮೂರ್ತಿ ಜೋಯ್ ಮಲ್ಯಾ ಮಲ್ಯ ಬಗಾಚಿ ಅವರಿಂದ ನ್ಯಾಯಪೀಠ ಹೈಕೋರ್ಟಿಗೆ ಏಕೆ ಮನವಿ ಸಲ್ಲಿಸಿಲ್ಲ. ಮೊದಲು ಹೈಕೋರ್ಟ್ ಮುಂದೆ ಹೋಗಿ ಎಂದು ಸೂಚನೆ ನೀಡಿದೆ.