HomeLatest Newsಅತಿ ವೇಗ, ನಿರ್ಲಕ್ಷ್ಯದ ಚಾಲನೆಯಿಂದ ಸವಾರ ಮೃತಪಟ್ಟರೆ ಕುಟುಂಬಕ್ಕೆ ಪರಿಹಾರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್ ಆದೇಶ

ಅತಿ ವೇಗ, ನಿರ್ಲಕ್ಷ್ಯದ ಚಾಲನೆಯಿಂದ ಸವಾರ ಮೃತಪಟ್ಟರೆ ಕುಟುಂಬಕ್ಕೆ ಪರಿಹಾರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಚಾಲಕರ ತಪ್ಪಿನಿಂದಾದ ಅಪಘಾತ ಪ್ರಕರಣದಲ್ಲಿ ಕುಟುಂಬಕ್ಕೆ ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಅತಿ ವೇಗ, ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಸವಾರ ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ ಮೋಟಾರ್ ವಾಹನ ಕಾಯ್ದೆಯಡಿ ವಿಮಾ ಕಂಪನಿ ಪರಿಹಾರ ನೀಡಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅತಿ ವೇಗದಲ್ಲಿ ಕಾರ್ ಚಾಲನೆ ಮಾಡಿದ್ದ ವ್ಯಕ್ತಿ ಮೃತಪಟ್ಟಿದ್ದು, ಅವರ ಪತ್ನಿ, ಪುತ್ರ ಮತ್ತು ಪೋಷಕರು 80 ಲಕ್ಷ ರೂಪಾಯಿ ಪರಿಹಾರ ಕೋರಿದ್ದರು. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಆರ್. ಮಹದೇವನ್ ಅವರ ಪೀಠ ಪರಿಹಾರ ನೀಡಲು ನಿರಾಕರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಹೈಕೋರ್ಟ್ ಈ ಕುರಿತಾಗಿ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿ, ವಿಮಾ ಕಂಪನಿ ಪರಿಹಾರ ನೀಡಬೇಕು ಎಂದು ಮೃತರ ಕಾನೂನುಬದ್ಧ ಉತ್ತರಾಧಿಕಾರಿಗಳು ಮನವಿ ಮಾಡಿದ್ದರು. ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಹೈಕೋರ್ಟ್ 2024ರ ನವೆಂಬರ್ ನಲ್ಲಿ ನಿರಾಕರಿಸಿತ್ತು. ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಅತಿ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಚಾಲಕರ ತಪ್ಪಿನಿಂದಾದ ಅಪಘಾತ ಪ್ರಕರಣದಲ್ಲಿ ಕುಟುಂಬಕ್ಕೆ ಪರಿಹಾರ ನೀಡಬೇಕಿಲ್ಲ ಎಂದು ಮೇಲ್ಮನವಿ ವಿಚಾರಣೆ ಆಲಿಸಿದ ಸುಪ್ರೀಂ ಕೋರ್ಟ್ ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular