HomeLatest Newsಯೋಗೀಶ್ ಗೌಡ ಕೊಲೆ ಕೇಸಲ್ಲಿ ಸಾಕ್ಷ್ಯ ನಾಶ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಶಾಕ್

ಯೋಗೀಶ್ ಗೌಡ ಕೊಲೆ ಕೇಸಲ್ಲಿ ಸಾಕ್ಷ್ಯ ನಾಶ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಶಾಕ್

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಹಿನ್ನಡೆಯಾಗಿದೆ.

ಶಾಸಕರ ಮೇಲಿದ್ದ ಸಾಕ್ಷ್ಯ ನಾಶ ಪ್ರಕರಣವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸಲ್ಲಿಸಿದ ಅರ್ಜಿಯನ್ನು ಮಂಗಳವಾರ ಸುಪ್ರೀಂಕೋರ್ಟ್ ಪುರಸ್ಕರಿಸಿದೆ. ಈ ಹಿಂದೆ ಹೈಕೋರ್ಟ್ ವಜಾ ಮಾಡಿದ್ದ ಸಾಕ್ಷ್ಯ ನಾಶ ಪ್ರಕರಣವನ್ನು ಎತ್ತಿ ಹಿಡಿದಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಮೇಲೆ ಹತ್ಯೆಗೆ ಸಂಬಂಧಿಸಿದ ಸಾಕ್ಷಿಗಳನ್ನು ನಾಶ ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು. ಆದರೆ ಈ ಆರೋಪವನ್ನು ಹೈಕೋರ್ಟ್ ಪುರಸ್ಕರಿಸದೆ ವಿನಯ್ ಕುಲಕರ್ಣಿ ಮೇಲಿದ್ದ ಸಾಕ್ಷ್ಯ ನಾಶ ಪ್ರಕರಣ ವಜಾಗೊಳಿಸಿತ್ತು. ಈ ತೀರ್ಪಿನ ವಿರುದ್ಧ ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2016ರ ಜೂನ್ 15 ರಂದು ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಮಾಡಲಾಗಿತ್ತು. ಕೊಲೆ ಪ್ರಕರಣವನ್ನು 2019 ರಲ್ಲಿ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿದ್ದು, ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಪಾತ್ರ ಇರುವ ಅನುಮಾನದ ಹಿನ್ನೆಲೆಯಲ್ಲಿ ಬಂಧಿಸಿದ್ದರು. ನಂತರ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಪಡೆದಿದ್ದರು. ಜೂನ್ 6 ರಂದು ಅವರ ಜಾಮೀನು ರದ್ದು ಮಾಡಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular